ETV Bharat / state

ಕೈಗಾರಿಕಾ ಚಟುವಟಿಕೆ ಪುನರಾರಂಭಕ್ಕೆ ಸಹಕರಿಸಿ: ವಲಸೆ ಕಾರ್ಮಿಕರಿಗೆ ಸಿಎಂ ಮನವಿ - ಕೈಗಾರಿಕಾ ಚಟುವಟಿಕೆ ಪುನರಾರಂಭ

ಕೇಂದ್ರ ಸರ್ಕಾರ ಆದೇಶ ಬಂದ ತಕ್ಷಣವೇ ಕೈಗಾರಿಕೆಗಳು ಪುನರ್​ ಆರಂಭವಾಗಲಿವೆ. ಈ ನಿಟ್ಟಿನಲ್ಲಿ ಸಹಕರಿಸುವಂತೆ ಸಿಎಂ ಯಡಿಯೂರಪ್ಪ ವಲಸೆ ಕಾರ್ಮಿಕರಲ್ಲಿ ಮನವಿ ಮಾಡಿದ್ದಾರೆ.

cm yadiyurappa request to migrant labours
ವಲಸೆ ಕಾರ್ಮಿಕರಿಗೆ ಸಿಎಂ ಮನವಿ
author img

By

Published : May 1, 2020, 3:42 PM IST

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳು ಪುನರಾರಂಭ ಮಾಡಲು ಸಹಕರಿಸುವಂತೆ ವಲಸೆ ಕಾರ್ಮಿಕರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೋವಿಡ್-19 ಸೋಂಕಿನಿಂದ ದೇಶಾದ್ಯಂತ ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ತಬ್ಧವಾಗಿವೆ. ಇದರಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ. ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ ಆದ್ದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗಬಾರದು ಎಂದು ಪ್ರಕಟಣೆ ಮೂಲಕ ಸಿಎಂ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.