ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 100 ಬೆಡ್ಗಳ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಸಿಎಂ ಯಡಿಯೂರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರೋಗಿಗಳೊಂದಿಗೆ ಸಹನೆ ಸಂಯಮದಿಂದ ನಡೆದುಕೊಳ್ಳುವಂತೆ ಕರೆ ನೀಡಿದರು.
ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಕೆಲಸ ಮಾಡುತ್ತಿವೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯೂ ಒಂದು, ದಯವಿಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ ಎಂದು ಸರ್ಕಾರಿ ವೈದ್ಯರಲ್ಲಿ ಸಿಎಂ ಯಡಿಯೂರಪ್ಪ ಮನವಿ ಜೊತೆ ಎಚ್ಚರಿಕೆಯನ್ನು ನೀಡಿದರು.
ನಾವು ಈ ಕಟ್ಟಡವನ್ನು ಕಟ್ಟುವುದರಿಂದ ಸಮಸ್ಯೆ ಬಗ್ಗೆ ಹರಿಯುವುದಿಲ್ಲ. ನಾನು ಸರ್ಕಾರದಿಂದ ಹಣವನ್ನು ಮಂಜೂರು ಮಾಡುತ್ತೇನೆ. ಆದರೆ ಆಸ್ಪತ್ರೆಗಳಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೋದರೆ ಏನು ಪ್ರಯೋಜನವಿಲ್ಲ. ಅದರಿಂದ ಸರ್ಕಾರಿ ವೈದ್ಯರು ಯಾವುದೇ ಆರೋಪಗಳಿಗೆ ಅವಕಾಶ ಕೊಡದೆ ಶ್ರದ್ಧೆಯಿಂದ ಒಳರೋಗಿಗಳಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದರು. ನಿಗದಿಯಾಗಿರುವಂತೆ 2012ಕ್ಕೆ ಈ ಕಟ್ಟಡದ ಕಾಮಗಾರಿ ಮುಗಿದು ಜನರ ಸೇವೆಗೆ ರೆಡಿಯಾಗಬೇಕು ಎಂದು ಸಿಎಂ ವೇದಿಕೆಯಲ್ಲೇ ಸಂಬಂಧಪಟ್ಟವರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬೆಂಗಳೂರು ನಗರಕ್ಕೆ ಬಹಳಷ್ಟು ಅವಶ್ಯಕತೆ ಇದ್ದಂತಹ ಹೊರ ರೋಗಿಗಳ ಚಿಕಿತ್ಸೆಗೆ ಬೇಕಾದಂತಹ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿದೆ. ಆ ಸಮಸ್ಯೆಯನ್ನು ಪೂರೈಸುವುದಕ್ಕೆ ಇದು ಪೂರಕವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ಎಂದು ಹೇಳಬಹುದು. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಹೇಳಲು ಇಚ್ಚಿಸುತ್ತೇನೆ ಎಂದರು.
ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಲೆಹರ್ ಸಿಂಗ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಹಾಗೂ ಸ್ಥಳೀಯ ಕಾರ್ಪೊರೇಟರ್ಗಳು ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯ ಪದಾಧಿಕಾರಿಗಳು ವೈದ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.