ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎನ್ನುವ ಮಾಹಿತಿ ಮಣಿಪಾಲ್ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
ಆಗಸ್ಟ್ 2ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ರೋಗ ಲಕ್ಷಣ ರಹಿತ ಸೋಂಕಾಗಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ನಿಗಾದಲ್ಲಿದ್ದರು. ಇದೀಗ 8ನೇ ದಿನವಾದ ಇಂದು ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಇಂದೇ ಸಿಎಂ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸ್ವತಃ ಸಿಎಂ ಯಡಿಯೂರಪ್ಪ ಮನೆಗೆ ತೆರಳಲು ಒತ್ತಡ ಹೇರುತ್ತಿದ್ದಾರೆ. ಹಾಗಾಗಿ ನಾಳೆ ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧರಿಸಿದ್ದರೂ ಇಂದೇ ಡಿಸ್ಚಾರ್ಜ್ ಮಾಡಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.
ಕೊರೊನಾದಿಂದ ಸಿಎಂ ಗುಣಮುಖ: ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ - CM qured from covid
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಯಡಿಯೂರಪ್ಪನವರ ಕೋವಿಡ್ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇಂದೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.