ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಟ್ರಾಫಿಕ್ ಎಂಜಿನಿಯರ್ಸ್ ಸೆಲ್ನಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸಿಬಿ ತನಿಖೆ ನಡೆಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
2017-18ಮತ್ತು 2018-19ರ ಸಾಲಿನಲ್ಲಿ ಬಿಬಿಎಂಪಿಯ ಟ್ರಾಫಿಕ್ ಎಂಜಿನಿಯರ್ಸ್ ವಿಭಾಗದಲ್ಲಿ ಅವ್ಯವಹಾರ ನಡೆದಿತ್ತು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಕೂಡ ಮಾಡಲಾಗಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಎಸಿಬಿಗೆ ಸಿಎಂ ಬಿಎಸ್ವೈ ಆದೇಶಿಸಿದ್ದಾರೆ. ಸದ್ಯ ಸಿಎಂ ಸೂಚನೆ ಮೇರೆಗೆ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಿದ್ದಾರೆ.