ಬೆಂಗಳೂರು: ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಫಲಿತಾಂಶದ ನಂತರ ಖುಷಿಯಾಗಿದ್ದಾರೆ. ಅಲ್ಲದೆ, ಇಂದು ಫುಲ್ ರಿಲ್ಯಾಕ್ಸ್ ಮೂಡಿನಲ್ಲಿದ್ದು ಅವರು ಬಂದ ಅತಿಥಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟರು.
ಸಿಎಂ ಯಡಿಯೂರಪ್ಪನವರು ತಮ್ಮ ಧವಳಗಿರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಬಂದಂತಹ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಬಳಿಕ ಕೆಲ ಅರ್ಜಿಗಳಿಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜನತಾ ದರ್ಶನ ಮುಗಿದ ಬಳಿಕ ನಿವಾಸಕ್ಕೆ ತೆರಳಲು ಮುಂದಾದ ಬಿಎಸ್ವೈ ಜೊತೆ ಸೆಲ್ಫಿ ತೆಗೆಸಿಕೊಳ್ಳುವ ಕೆಲವರು ಇಂಗಿತ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ ಕೆಲಕಾಲ ನಿವಾಸ ಮುಂಭಾಗದಲ್ಲಿದ್ದು, ಜನರೊಂದಿಗೆ ಸೆಲ್ಫಿಗೆ ಪೋಸ್ ಕೊಟ್ಟರು. ಹಾಗೆಯೇ ಸಾರ್ವಜನಿಕರು ಕೂಡ ಸಿಎಂ ಮನೆಯ ಬಳಿ ಸೆಲ್ಫಿ ತೆಗೆದುಕೊಂಡು ಸಂತಸ ವ್ಯಕ್ತಪಡಿಸಿದರು.