ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ 6ನೇ ನೀತಿ ಆಯೋಗ ಆಡಳಿತ ಮಂಡಳಿಯ ವರ್ಚುಯಲ್ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.
ಗೃಹ ಕಚೇರಿ ಕಷ್ಣಾದಿಂದ ನೀತಿ ಆಯೋಗದ ವರ್ಚುಯಲ್ ಸಭೆಯಲ್ಲಿ ಸಿಎಂ ಭಾಗಿಯಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಸೇರಿ ಹಿರಿಯ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಇಂದು ಸಂಜೆವರೆಗೆ ನಡೆಯುವ ನೀತಿ ಆಯೋಗ ಆಡಳಿತ ಮಂಡಳಿ ಸಭೆಯಲ್ಲಿ ಹಲವು ವಿಚಾರಗಳನ್ನು ರಾಜ್ಯ ಸರ್ಕಾರ ಪ್ರಧಾನಿ ಮುಂದಿಡಲಿದೆ.
ಸಭೆಯಲ್ಲಿ ಕೃಷಿ, ಮೂಲಸೌಕರ್ಯ, ಉತ್ಪಾದನೆ, ಮಾನವ ಸಂಪನ್ಮೂಲ ಅಭಿವೃದ್ಧಿ, ಆರೋಗ್ಯ ಮತ್ತು ಪೌಷ್ಟಿಕಾಂಶದ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಲಿದೆ. ಕೋವಿಡ್ 19 ಲಸಿಕಾ ಕಾರ್ಯಕ್ರಮದ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ. ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆ, ಅಭಿವೃದ್ಧಿ ಸಂಬಂಧ ಸಭೆಯಲ್ಲಿ ಸಿಎಂ ಅಭಿಪ್ರಾಯ ಮಂಡಿಸಲಿದ್ದಾರೆ.