ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಾರಿ ಇಲಾಖಾವಾರು ಬಜೆಟ್ ಮಂಡಿಸುವ ಬದಲು ಇಡೀ ಬಜೆಟ್ ಅನ್ನು ಆರು ವಲಯಗಳಾಗಿ ಹಂಚಿಕೆ ಮಾಡಿ ಹೊಸ ರೀತಿಯಲ್ಲಿ ಬಜೆಟ್ ಮಂಡಿಸಿದ್ದಾರೆ.
ಈ ಕುರಿತು ಬಜೆಟ್ನಲ್ಲಿಯೇ ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ, ನಮ್ಮ ಸರ್ಕಾರವು ನಾಡಿನ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಯಲ್ಲಿರುವ ಪ್ರಮುಖ ಯೋಜನೆಗಳನ್ನು ಮುಂದುವರಿಸಲಿದೆ. ಭಾಗ್ಯಲಕ್ಷ್ಮಿ ಯೋಜನೆ, ಶಾಲಾ ಮಕ್ಕಳಿಗೆ ಬೈಸಿಕಲ್ ಯೋಜನೆ ಮೊದಲಾದ ಹಲವು ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲಾಗುವುದು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ. ಇದನ್ನು ಮನಗಂಡು ನಾನು ಈ ಆಯೋಗವನ್ನು ಇಲಾಖಾವಾರು ವಿಂಗಡಿಸಿ ಆರು ವಲಯಗಳನ್ನಾಗಿ ವಿಂಗಡಿಸಿ ಮಂಡಿಸುತ್ತೇನೆ ಎಂದಿದ್ದಾರೆ.
ವಲಯಾವಾರು ಮಾಹಿತಿ:
- 1.ಕೃಷಿ ಮತ್ತು ಪೂರಕ ಚಟುವಟಿಕೆಗಳು
- 2.ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ
- 3. ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ
- 4. ಬೆಂಗಳೂರು ಸಮಗ್ರ ಅಭಿವೃದ್ಧಿ
- 5.ಸಂಸ್ಕೃತಿ ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ
- 6.ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು