ETV Bharat / state

ನನ್ನೊಂದಿಗೆ‌ ಚರ್ಚಿಸಿಯೇ ಎಸ್​​ಎಸ್​ಎಲ್​​ಸಿ ಪರೀಕ್ಷಾ ದಿನಾಂಕ ಪ್ರಕಟ: ಸಿಎಂ ಸ್ಪಷ್ಟನೆ

ಎಸ್​​ಎಸ್​ಎಲ್​​ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ ಎಂದು ಸಿಎಂ ತಿಳಿಸಿದ್ದಾರೆ.

cm-yeddyurappa-tweet-about-sslc-exam-date-announcement
ನನ್ನೊಂದಿಗೆ‌ ಚರ್ಚಿಸಿಯೇ ಎಸ್​​ಎಸ್​ಎಲ್​​ಸಿ ಪರೀಕ್ಷಾ ದಿನಾಂಕ ಪ್ರಕಟ: ಸಿಎಂ ಸ್ಪಷ್ಟನೆ
author img

By

Published : Jun 29, 2021, 10:48 AM IST

ಬೆಂಗಳೂರು: ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ, ತಜ್ಞರ ಸಮಿತಿ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ಎಸ್​​ಎಸ್​ಎಲ್​​ಸಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಆರೋಗ್ಯ ಸಚಿವ ಸುಧಾಕರ್ ಮತ್ತು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡುವಿನ ಪ್ರತಿಷ್ಠೆಗೆ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎನ್ನುವ ಮಾತುಗಳು ಹರಿದಾಡುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಸ್ಪಷ್ಟೀಕರಣದ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

  • ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.

    — CM of Karnataka (@CMofKarnataka) June 29, 2021 " class="align-text-top noRightClick twitterSection" data=" ">

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್​​ಎಸ್​ಎಲ್​​ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಸಿಎಂ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜು.19, 22 ರಂದು SSLC ಪರೀಕ್ಷೆ.. ಯಾವ ಪರೀಕ್ಷೆ ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಎಸ್​​ಎಸ್​ಎಲ್​​ಸಿ ಪರೀಕ್ಷಾ ದಿನಾಂಕ ಪ್ರಕಟವಾದ ನಂತರ ಸಚಿವ ಸುಧಾಕರ್​ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಪರೀಕ್ಷಾ ದಿನಾಂಕ ಕುರಿತು ಸುರೇಶ್ ಕುಮಾರ್ ತಮಗೆ ಯಾವುದೇ ಮಾಹಿತಿ ನೀಡಿರಲಿಲ್ಲ, ತಜ್ಞರ ಸಮಿತಿ ವರದಿಯಲ್ಲಿ ಪರೀಕ್ಷೆ ಬಗ್ಗೆ ಹೇಳಿಯೇ ಇಲ್ಲ. ಅಲ್ಲದೆ ಆರೋಗ್ಯ ಇಲಾಖೆ ಅನುಮತಿ ಪಡೆದಿಲ್ಲ, ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಗೊತ್ತಾಗಿದ್ದು, ಈ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದಿದ್ದರು.

ಇದಕ್ಕೆ ವ್ಯತಿರಿಕ್ತವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ ಚರ್ಚಿಸಿಯೇ ದಿನಾಂಕ ಪ್ರಕಟ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದರು. ಇದು ಉಭಯ ಸಚಿವರ ನಡುವೆ ಹೊಂದಾಣಿಕೆ ಕೊರತೆಯ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಇಬ್ಬರು ಸಚಿವರ ನಡುವಣ ಪ್ರತಿಷ್ಠೆಗೆ ಮಕ್ಕಳ ಜೀವದ ಜೊತೆ ಆಟವಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಈಶಾನ್ಯದ ಈ ರಾಜ್ಯದಲ್ಲಿ 34 ಸಾವಿರ ಮಕ್ಕಳನ್ನು ಕಾಡಿದ ಕೋವಿಡ್‌ 2ನೇ ಅಲೆ!

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.