ಬೆಂಗಳೂರು: ನಗರದ ಆಸ್ಟರ್ ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು. ನಿನ್ನೆ ಚಿತ್ರದುರ್ಗದಲ್ಲಿ ಲೋ ಶುಗರ್ನಿಂದ ಅಸ್ವಸ್ಥರಾಗಿದ್ದ ಡಿ.ವಿ. ಸದಾನಂದಗೌಡ ಅವರು ಚಿಕಿತ್ಸೆಗಾಗಿ ಆಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶೀಘ್ರವಾಗಿ ಗುಣಮುಖರಾಗಿ ಕೆಲ ಸಮಯ ವಿಶ್ರಾಂತಿ ಪಡೆದು ಕರ್ತವ್ಯಕ್ಕೆ ಮರಳುವಂತೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಲೋ ಶುಗರ್ ನಿಂದಾಗಿ ಏರ್ ಪೋರ್ಟ್ ರಸ್ತೆಯಲ್ಲಿರುವ ಆಸ್ಟರ್ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಚಾರಿಸಿದರು. ಡಿಸಿಎಂ ಗೊಂವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಸಚಿವರೊಂದಿಗೆ ಆಸ್ಪತ್ರೆಗೆ ತೆರಳಿ, ಡಿವಿಎಸ್ ಅವರ ಯೋಗಕ್ಷೇಮ ವಿಚಾರಿಸಿದರು.
ಶೀಘ್ರ ಗುಣಮುಖರಾಗಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕೆಲಕಾಲ ವಿಶ್ರಾಂತಿ ಪಡೆದು ನಂತರ ಕರ್ತವ್ಯಕ್ಕೆ ಮರಳಿ ಎಂದು ಸಿಎಂ ಯಡಿಯೂರಪ್ಪ ಸಲಹೆ ನೀಡಿದರು. ಕಾರಜೋಳ, ಲಕ್ಷ್ಮಣ ಸವದಿ ಮತ್ತಿತರ ಸಚಿವರು ಕೂಡ ಭೇಟಿಯಾಗಿ ಸದಾನಂದಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕರ ಜೊತೆ ಸಮಾಲೋಚನಾ ಸಭೆ ನಡೆಸಲು ಆಗಮಿಸಿದ್ದ ಸಿಎಂ, ಸಭೆಗೂ ಮೊದಲು ಆಸ್ಟರ್ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಸಿಎಂಗೆ ಸಂಪುಟ ಸಹೋದ್ಯೋಗಿಗಳು ಸಾಥ್ ನೀಡಿದರು. ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ಆರೋಗ್ಯ ವಿಚಾರಿಸಿ ನಂತರ ಕ್ಯಾಪಿಟಲ್ ಹೋಟೆಲ್ ಗೆ ವಾಪಸ್ಸಾಗಿ ಶಾಸಕರ ಸಭೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ.
ಓದಿ : ಬಡ ಕಲಾವಿದರಿಗೆ ನಾನು ಸಹಾಯ ಮಾಡಲು ಸಿದ್ಧ :ಸುಧಾಮೂರ್ತಿ ಭರವಸೆ