ETV Bharat / state

ಜನತಾ ಕರ್ಫ್ಯೂ ಬೆಂಬಲಿಸುವಂತೆ ನಾಡಿನ ಜನತೆಗೆ ಸಿಎಂ ಮನವಿ - ಬಿ.ಎಸ್. ಯಡಿಯೂರಪ್ಪ ಲೇಟೆಸ್ಟ್ ನ್ಯೂಸ್​

ನಾಳೆ ಜನತಾ ಕರ್ಫ್ಯೂ ಪಾಲನೆಗೆ ನಾಡಿನ ಜನತೆಯ ಬೆಂಬಲ ಅತೀ ಅಗತ್ಯವಾಗಿದ್ದು, ನಾವೆಲ್ಲರೂ ಮನೆಯಲ್ಲಿ ಉಳಿದು ಕರ್ಫ್ಯೂವನ್ನು ಬೆಂಬಲಿಸೋಣ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

CM Yediyurappa
ಬಿ.ಎಸ್. ಯಡಿಯೂರಪ್ಪ
author img

By

Published : Mar 21, 2020, 3:18 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವಂತೆ ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕರ್ಫ್ಯೂ ಪಾಲನೆಗೆ ರಾಜ್ಯದ ಜನರ ಬೆಂಬಲ ಅತಿ ಅಗತ್ಯವಾಗಿದೆ. ನಾವೆಲ್ಲರೂ ಮನೆಯಲ್ಲಿ ಉಳಿದು ಕರ್ಫ್ಯೂವನ್ನು ಬೆಂಬಲಿಸೋಣ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಕರ್ನಾಟಕ ರಾಜ್ಯವು ದೇಶದಲ್ಲಿ ಕೊವಿಡ್-19 ವೈರಾಣು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಕಾರಣ. ಈ ಸಮಯದಲ್ಲಿ ನನ್ನ ಕಳಕಳಿಯ ಮನವಿಯೆಂದರೆ ರಾತ್ರಿ 9.00 ಗಂಟೆಯ ನಂತರ ಕರ್ಫ್ಯೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರಗಡೆ ಬಂದು ಸಂಭ್ರಮಿಸುವುದಾಗಲೀ ಅಥವಾ ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸುವುದಾಗಲೀ ಮಾಡಬೇಡಿ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮನೆ ಹೊರಗಡೆ ಬರದೆ ಮನೆಯವರೆಲ್ಲರೂ ಆಪ್ತರೊಂದಿಗೆ ಕಾಲ ಕಳೆಯಲು ಮನವಿ ಮಾಡಿರುತ್ತಾರೆ. ಕರ್ಫ್ಯೂ ಅವಧಿ ಮುಗಿದ ಬಳಿಕ ಮನೆಯಿಂದ ಹೊರಗೆ ಬರಬೇಡಿ. ಇದಕ್ಕೆ ಒಂದು ಅರ್ಥ ಬರಬೇಕಾದರೆ ನಾವು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ.

ಸಂಜೆ 5 ಗಂಟೆಗೆ ನಿಮ್ಮ ಮನೆಯ ಕಿಟಕಿಗಳಿಂದ ಮತ್ತು ಚಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ಸರ್ಕಾರದ ಮತ್ತು ರೋಗ ತಡೆಯುವಲ್ಲಿ ಭಾಗಿಯಾಗಿರುವ ಜನರಿಗೆ ನೈತಿಕ ಬೆಂಬಲ ಸೂಚಿಸಲು ಮಾತ್ರ ಮರೆಯಬೇಡಿ ಎಂದು ಅವರು‌ ಇದೇ ವೇಳೆ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.