ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಚಾರಿಸಿದರು.
ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿದ ಸಿಎಂ, ಡಿ.ಕೆ.ಶಿವಕುಮಾರ್ ಅವರ ಆರೋಗ್ಯದ ಕುರಿತು ಯೋಗಕ್ಷೇಮ ವಿಚಾರಿಸಿ, ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕರ್ತವ್ಯಕ್ಕೆ ಮರಳಿ ಎಂದು ಹಾರೈಸಿದರು.
ಜೊತೆಗೆ ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಸಲಹೆ ನೀಡಿದ್ದಾರೆ.