ಬೆಂಗಳೂರು: ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ.
ಈ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಸಚಿವ ಸುಧಾಕರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಈಶ್ವರ ಖಂಡ್ರೆ, ಡಿಸಿಎಂಗಳಾದ ಲಕ್ಷಣ್ ಸವದಿ, ಅಶ್ವತ್ಥ್ ನಾರಾಯಣ, ಕಾರಜೋಳ, ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.
ಇನ್ನು ಇದಕ್ಕೂ ಮುನ್ನ ಸಿಎಂ ಸಚಿವರ ಸಭೆ ನಡೆಸಿದರು. ಈ ವೇಳೆ ಸರ್ವಪಕ್ಷ ಸಭೆಯಲ್ಲಿ ಪ್ರಸ್ತಾಪ ಮಾಡಬೇಕಿರುವ ವಿಷಯಗಳು, ಲಾಕ್ಡೌನ್ ಆದೇಶ ನಂತರ ಸರ್ಕಾರ ಕೈಗೊಂಡಿರುವ ಕ್ರಮಗಳು, ಏಪ್ರಿಲ್ 14 ರವರೆಗೆ ಯಾವ ರೀತಿ ಕ್ರಮ ಇರಲಿದೆ ಎನ್ನುವ ಕುರಿತು ಪ್ರತಿಪಕ್ಷ ನಾಯಕರಿಗೆ ವಿವರಣೆ ನೀಡಲು ಸಚಿವರಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೋವಿಡ್ -19 ನಿಯಂತ್ರಣದ ಉಸ್ತುವಾರಿ ನೋಡಿಕೊಳ್ಳುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.