ಬೆಂಗಳೂರು: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರದಲ್ಲಿ ಇರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿ ಬಳಿಕ ಸಿಎಂ ಮಾತನಾಡಿದ್ದಾರೆ.
20 ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಆಗಿದೆ. ಬಹಳಷ್ಟು ಕಡೆ ಬಿತ್ತನೆ ಕಾರ್ಯ ಮುಗಿಯುತ್ತಿದೆ. ಮುಂದೆ ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದೇವೆ. ಅಗತ್ಯ ಇರುವ ಕಡೆ ಎನ್ಡಿಆರ್ಎಫ್ ತಂಡ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಯಾವುದೇ ಅನಾಹುತ ಆಗದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನೆರೆ ಹಾನಿ ಪರಿಹಾರಕ್ಕಾಗಿ ಎಷ್ಟು ಹಣ ಬೇಕಾದರು ಬಿಡುಗಡೆ ಮಾಡುತ್ತೇವೆ. 996 ಕೋಟಿ ಜಿಲ್ಲಾಧಿಕಾರಿಗಳ ಅಕೌಂಟ್‌ನಲ್ಲಿ ಹಣ ಇದೆ ಎಂದಿದ್ದಾರೆ.
ಓದಿ:ನಾಯಕತ್ವ ಬದಲಾವಣೆ ಮಾಡಿದ್ರೆ ಉಕ ಲಿಂಗಾಯತ ನಾಯಕರಿಗೆ ಅವಕಾಶ ಕೊಡಿ: ಜಯಮೃತ್ಯುಂಜಯ ಶ್ರೀ