ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ಪ್ರತಿ ಭಾನುವಾರ ಈಗಾಗಲೇ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದ್ದು, ಇದೀಗ ಶನಿವಾರ ಕೂಡ ಲಾಕ್ಡೌನ್ ಜಾರಿಗೊಳಿಸುವ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ಮಹತ್ವದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಈ ವಿಷಯವಾಗಿ ಚರ್ಚೆ ನಡೆಸಲಾಗಿದ್ದು, ರಾಜ್ಯದಲ್ಲಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿರುವುದು ಹೆಚ್ಚು ಆತಂಕಕ್ಕೊಳಗಾಗುವಂತೆ ಮಾಡಿದೆ. ಹೀಗಾಗಿ ಭಾನುವಾರದ ರೀತಿ ಶನಿವಾರವೂ ಲಾಕ್ಡೌನ್ ಜಾರಿಗೊಳಿಸಿ, ಕೆಲವೊಂದು ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿಗೊಳಿಸಲು ಮುಂದಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, ಹೀಗಾಗಿ ಬೇರೆ ಜಿಲ್ಲೆಗಳಿಂದ ಬರುವ ವಾಹನ ಸಂಪೂರ್ಣವಾಗಿ ನಿಷೇಧ ಮಾಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ.