ETV Bharat / state

ಜುಲೈ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ - rain in coastal districts

ಜುಲೈ 4 ರಿಂದ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

rain
ಕರಾವಳಿ ಜಿಲ್ಲೆಗಳಲ್ಲಿ ಮಳೆ
author img

By

Published : Jul 4, 2021, 5:32 PM IST

ಬೆಂಗಳೂರು: ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದ್ರ ಪರಿಣಾಮ, ಇಂದಿನಿಂದ ಜುಲೈ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ

ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಮುಖ್ಯವಾಗಿ, ಗದಗ ಮತ್ತು ಕಾರವಾರದಲ್ಲಿ 4 ಸೆಂ.ಮೀ, ಕೊಪ್ಪಳ ಜಿಲ್ಲೆಯಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಜುಲೈ 5ರಿಂದ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7 ಮತ್ತು 8 ರಂದು ಎಲ್ಲೊ ಅಲರ್ಟ್ ಕೊಡಲಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.