ETV Bharat / state

'ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್​ನಿಂದ ಮಂಗಳೂರು, ಉಡುಪಿಗೆ ಅನುಕೂಲ'

author img

By

Published : Jan 5, 2021, 3:57 PM IST

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಮೂಲಕ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ ಲೈನ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುವುದು. ಇದರಿಂದ ವಾಣಿಜ್ಯ ಚಟುವಟಿಕೆಗಳಿಗೂ ಅನುಕೂಲವಾಗಲಿದೆ ಎಂದು ಸಿಎಂ ಬಿಎಸ್​ವೈ ಹೇಳಿದರು.

Cochin-Mangalore Natural Gas Pipeline Inauguration
ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆ

ಬೆಂಗಳೂರು : ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​​ಲೈನ್ ಯೋಜನೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್​ಲೈನ್ ಯೋಜನೆ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುವುದು. ಇದರಿಂದಾಗಿ ವಾಣಿಜ್ಯ ಚಟುವಟಿಕೆ, ಉದ್ದಿಮೆಗಳಿಗೆ ವಿಶೇಷವಾಗಿ ಎಂಸಿಎಫ್ ಹಾಗೂ ಎಂಆರ್​​ಪಿಎಲ್​ಗಳಿಗೆ ಅನುಕೂಲವಾಗಲಿದೆ ಎಂದರು.

ಓದಿ: ಡಿನೋಟಿಫಿಕೇಷನ್​​ ಪ್ರಕರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಮುಂದುವರೆಸಲು ಹೈಕೋರ್ಟ್​ ಆದೇಶ

ಧಾಬೋಲ್-ಬೆಂಗಳೂರು ಅನಿಲ್ ಪೈಪ್ ಲೈನ್ ಯೋಜನೆ ಈಗಾಗಲೇ ಕಾರ್ಯಗತವಾಗಿದ್ದು, ಬೆಂಗಳೂರು ನಗರವೊಂದರಲ್ಲೇ 25 ಸಾವಿರ ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುತ್ತಿದೆ. ಸುಮಾರು 2.8 ಲಕ್ಷಕ್ಕೂ ಹೆಚ್ಚು ಜನರು ನೈಸರ್ಗಿಕ ಅನಿಲ ಸಂಪರ್ಕ ಕೋರಿ ನೋಂದಾಯಿಸಿಕೊಂಡಿದ್ದು, 1.68 ಲಕ್ಷ ಮನೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ನೈಸರ್ಗಿಕ ಅನಿಲ ಬಳಕೆ ಪ್ರಮಾಣ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಲವು ಸವಾಲುಗಳ ನಡುವೆಯೂ ಯೋಜನೆಯನ್ನು ಪೂರ್ಣಗೊಳಿಸಿದ ಪ್ರಧಾನ ಮಂತ್ರಿಯವರ ದೃಢ ಸಂಕಲ್ಪವನ್ನು ಬಿಎಸ್​ವೈ ಶ್ಲಾಘಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.