ETV Bharat / state

ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಬರ್ಬರ ಹತ್ಯೆ - ಈಟಿವಿ ಭಾರತ ಕನ್ನಡ ನ್ಯೂಸ್​​

ಕಾಲೇಜು ಮುಗಿಸಿ ಮನೆ ಹೋಗುತ್ತಿದ್ದ ಯುವತಿ ಹತ್ಯೆ - ರಾಜಾನುಕುಂಟೆ‌ ಸಮೀಪದ ಶಾನುಭೋಗನಹಳ್ಳಿಯಲ್ಲಿ ಘಟನೆ

college-student-murdered-in-yalahanka
ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಬರ್ಬರ ಹತ್ಯೆ
author img

By

Published : Jan 17, 2023, 9:45 PM IST

ಯಲಹಂಕ : ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ‌ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ‌ ಸಮೀಪದ ಶಾನುಭೋಗನಹಳ್ಳಿಯಲ್ಲಿ ಇಂದು ಸಂಜೆ ನಡೆದಿದೆ. ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಇಂದು ಸಂಜೆ 5 ಗಂಟೆ ಸುಮಾರಿಗೆ ಕಾಲೇಜು‌ ಮುಗಿಸಿ ಮನೆಗೆ ಹೊರಟಿದ್ದ ಯವತಿ ದಿಬ್ಬೂರು ಗೇಟಿನಲ್ಲಿ‌ ಬಸ್​ನಿಂದ ಇಳಿದಿದ್ದಾರೆ. ಅಲ್ಲಿಂದ ಶಾನುಭೋಗನಹಳ್ಳಿಗೆ ನಡೆದು ಹೋಗುವಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಕತ್ತು‌ಸೀಳಿ ಹತ್ಯೆ‌ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆಗೀಡಾದ ಯುವತಿ ಯಲಹಂಕದ ಕಾಲೇಜು ಒಂದರಲ್ಲಿ ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಪ್ರೀತಿ ನಿರಾಕರಿಸಿದ ಹಿನ್ನೆಲೆ ಯುವತಿಯನ್ನು ಹತ್ಯೆ‌ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿತ: ಕಳೆದ ಕೆಲವು ದಿನಗಳ ಹಿಂದೆ ಯಲಹಂಕದ ಪ್ರತಿಷ್ಟಿತ ಕಾಲೇಜೊಂದರಲ್ಲಿ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ ಅದೇ ಚಾಕುವಿನಿಂದ ತಾನು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಯಲಹಂಕ ರಾಜಾನಕುಂಟೆ ಬಳಿಯ ಕಾಲೇಜಿನಲ್ಲಿ ಕೋಲಾರ ಮುಳುಬಾಗಿಲು ಮೂಲದ 19 ವರ್ಷದ ಯುವತಿ ಮೇಲೆ ಪವನ್ ಕಲ್ಯಾಣ್ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದ. ಬಳಿಕ ತಾನೂ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿಗಳು ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ಮಧ್ಯೆ ಯುವತಿ ಕೊನೆಯುಸಿರೆಳೆದಿದ್ದಳು. ಆರೋಪಿ ಯುವಕ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಆರೋಪಿ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಮೃತ ವಿದ್ಯಾರ್ಥಿನಿ ಮತ್ತು ಪವನ್ ಕಲ್ಯಾಣ್ ಇಬ್ಬರೂ ಕೋಲಾರ ಮೂಲದವರು. ವಿದ್ಯಾರ್ಥಿನಿಯನ್ನು ಪವನ್ ಪ್ರೀತಿಸುತ್ತಿದ್ದ. ಆದರೆ, ಪವನ್ ಪ್ರೀತಿಗೆ ಆಕೆ ಸಮ್ಮತಿಸಿರಲಿಲ್ಲವಂತೆ. ಇದರಿಂದ ಕೋಪಗೊಂಡಿದ್ದ ಪವನ್​ ಏಕಾಏಕಿ ಕಾಲೇಜ್ ಗೆ ಬಂದು ಚಾಕುವಿನಿಂದ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದರು. ಇನ್ನು ಕೊಲೆ ಆರೋಪಿ ಪವನ್ ಕಲ್ಯಾಣ್​ ಬೇರೆ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿತ್ತು. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಎಸ್ಪಿ, ಆರೋಪಿ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಎಂದು ವೈದ್ಯರು ಹೇಳಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದೇವೆ. ಇಬ್ಬರೂ ಬೇರೆ ಬೇರೆ ಕಾಲೇಜಿನಲ್ಲಿ ಓದುತ್ತಿದ್ದರಿಂದ ಇವರಿಬ್ಬರ ಬಗ್ಗೆ ಸಹಪಾಠಿಗಳಿಗೂ ಹೆಚ್ಚಿನ ಮಾಹಿತಿ ಇರಲಿಲ್ಲ. ಹೀಗಾಗಿ ಬೇರೆ ಆಯಾಮಗಳಲ್ಲಿ ಈ ಕೊಲೆಯ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದರು.

ಇದನ್ನೂ ಓದಿ :ಕಾಲೇಜಿನಲ್ಲಿ ಎಂ ಟೆಕ್​ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ.. ಬೆಚ್ಚಿಬಿದ್ದ ಬೆಂಗಳೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.