ETV Bharat / state

ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಡಿಕೆಶಿ ಸಂತಾಪ - Comedian Bullet Prakash passes away

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನ
ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನ
author img

By

Published : Apr 6, 2020, 7:39 PM IST

ಬೆಂಗಳೂರು: ಹಾಸ್ಯನಟ ಬುಲೆಟ್ ಪ್ರಕಾಶ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಬುಲೆಟ್ ಪ್ರಕಾಶ್ ಅವರು ಉತ್ತಮ ನಟ. ಮುನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕೇವಲ 44ನೇ ವಯಸ್ಸಿಗೆ ವಿಧಿವಶರಾಗಿರುವುದು ಬೇಸರದ ಸಂಗತಿ ಎಂದರು.

ಬಹುದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಇತ್ತೀಚೆಗೆ ಅನಾರೋಗ್ಯದ ವಿರುದ್ಧ ಹೋರಾಡಿ ಚೇತರಿಸಿಕೊಂಡು ಮತ್ತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದರು. ಆದರೆ ವಿಧಿ ಕೊನೆಗೂ ಅವರನ್ನು ಸಾವಿಗೆ ದೂಡಿದೆ.

ಅವರ ಸಾವಿನಿಂದ ಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿದೆ ಎಂದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಆಶಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.