ETV Bharat / state

ಆಮ್‌ ಆದ್ಮಿ ಪಕ್ಷ ಸೇರಿದ ಹಾಸ್ಯನಟ ಟೆನ್ನಿಸ್‌ ಕೃಷ್ಣ - ಈಟಿವಿ ಭಾರತ್ ಕನ್ನಡ ಸುದ್ದಿ

ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ(ಎಎಪಿ) ಯಶಸ್ವಿಯಾಗುತ್ತಿದೆ ಎಂದು ಖ್ಯಾತ ಹಾಸ್ಯನಟ ಟೆನ್ನಿಸ್​ ಕೃಷ್ಣ ಹೇಳಿದರು.

ಹಾಸ್ಯನಟ ಟೆನ್ನಿಸ್‌ ಕೃಷ್ಣ
ಹಾಸ್ಯನಟ ಟೆನ್ನಿಸ್‌ ಕೃಷ್ಣ
author img

By

Published : Aug 4, 2022, 4:26 PM IST

Updated : Aug 4, 2022, 4:45 PM IST

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಅವರಿಂದು ಆಮ್‌ ಆದ್ಮಿ ಪಾರ್ಟಿ(ಎಎಪಿ) ಸೇರ್ಪಡೆಯಾದರು. ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನಟನನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಹಾಸ್ಯನಟ ಟೆನ್ನಿಸ್‌ ಕೃಷ್ಣ ಅವರು ಮಾತನಾಡಿದರು

ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, "ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿರುವ ಎಎಪಿ ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್‌ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿ ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು" ಎಂದರು.

ಪೃಥ್ವಿ ರೆಡ್ಡಿ ಮಾತನಾಡಿ, "ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿಯು ಭದ್ರವಾಗಿ ಬೇರೂರುತ್ತಿದೆ. ಸಿನಿಮಾ ಸಾಧಕರು, ದಕ್ಷ ಅಧಿಕಾರಿಗಳು, ರೈತ ನಾಯಕರು, ಸಮಾಜಸೇವಕರು, ವಕೀಲರು ಹಾಗು ಉಪನ್ಯಾಸಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ದೇಶಕ್ಕೆ ಆಮ್‌ ಆದ್ಮಿ ಪಾರ್ಟಿಯೊಂದೇ ಆಶಾಕಿರಣ ಎಂಬುದು ಯುವಜನತೆಗೆ ಮನವರಿಕೆಯಾಗುತ್ತಿದೆ. ಜನಪ್ರಿಯ ನಟರಾದ ಟೆನಿಸ್ ಕೃಷ್ಣ ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಸ್ವಚ್ಛ ರಾಜಕೀಯ ಹಾಗೂ ಪಾರದರ್ಶಕ ಆಡಳಿತವೇ ನಮ್ಮೆಲ್ಲರ ಧ್ಯೇಯ. ಇದನ್ನು ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ" ಎಂದು ತಿಳಿಸಿದರು.

650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯ: ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, "ಟೆನಿಸ್‌ ಕೃಷ್ಣ ಅವರ ತಂದೆ, ಕೆಂಗಲ್‌ ಹನುಮಂತಯ್ಯ, ವೀರೇಂದ್ರ ಹೆಗ್ಗಡೆ ಸೇರಿದಂತೆ ಅನೇಕ ಗಣ್ಯರಿಗೆ ಟೆನಿಸ್‌ ತರಬೇತಿ ನೀಡಿದವರು. ಕೃಷ್ಣ ಅವರು ಕೂಡ ತಂದೆಯ ಹಾದಿಯಲ್ಲೇ ಸಾಗಿ ಟೆನಿಸ್‌ ತರಬೇತಿ ನೀಡಿ, ಟೆನಿಸ್‌ ಕೃಷ್ಣ ಎಂದೇ ಮನೆಮಾತಾಗಿದ್ದಾರೆ. ಕನ್ನಡದ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಗಿಸುವ ಮೂಲಕ ಕನ್ನಡಿಗರ ಆಯುಸ್ಸು ಹೆಚ್ಚಿಸಿದ್ದಾರೆ. ಡಾ.ರಾಜ್‌ಕುಮಾರ್‌, ವಿಷ್ಣುವರ್ಧನ್‌, ಶಂಕರ್‌ನಾಗ್‌ ಮುಂತಾದ ಮೇರುನಟರ ಜೊತೆ ಅಭಿನಯಿಸಿದ ಕೃಷ್ಣ ಇಂದು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಪಕ್ಷಕ್ಕೆ ಹೆಮ್ಮೆಯ ವಿಚಾರ" ಎಂದರು.

ಇದನ್ನೂ ಓದಿ: 'ನನ್ನ ಕೈ ಹಿಡಿದು ಕೈ ಎತ್ತಿರಲಿಲ್ಲವೇ?': ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯ

Last Updated : Aug 4, 2022, 4:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.