ಬೆಂಗಳೂರು: ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಮಲ್ಲೇಶ್ವರಂ ಬಿಜೆಪಿ ಕಚೇರಿಯಿಂದ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್ ಸೇರಿದಂತೆ 13 ಮಂದಿ ನಾಯಕರು ವರ್ಚುವಲ್ ಮೂಲಕ ಪಾಲ್ಗೊಂಡಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆ ಕುರಿತಾಗಿ ಚರ್ಚೆ ನಡೆಯಲಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ರಾಷ್ಟ್ರೀಯ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.
ರಾಜ್ಯದಿಂದ ವರ್ಚುವಲ್ ಮೂಲಕ ಮಲ್ಲೇಶ್ವರಂ ಬಿಜೆಪಿ ಕಚೇರಿಯಿಂದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಕೋಟಾ ಶ್ರೀನಿವಾಸ ಪೂಜಾರಿ, ಲಕ್ಷ್ಮಣ್ ಸವದಿ, ಸಂಸದ ಉಮೇಶ್ ಜಾದವ್, ರಾಜ್ಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅರುಣ್ ಕುಮಾರ್, ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಭಾಗಿಯಾಗಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಬಲವರ್ಧನೆ ಹಾಗೂ ಮುಂದಿನ ಕಾರ್ಯಯೋಜನೆಯ ಕುರಿತಾಗಿ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಚುನಾವಣೆ ಎದುರಾಗಲಿದ್ದು, ಈ ನಿಟ್ಟಿನಲ್ಲಿ ಏನೆಲ್ಲಾ ಕಾರ್ಯತಂತ್ರಗಳನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಪಕ್ಷ ಸಂಘಟನೆ ಸಂಬಂಧ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.