ETV Bharat / state

ಅಕ್ಟೋಬರ್ 12ರಿಂದ ಸಂವೇದ ಪಾಠ ಸರಣಿ ಆರಂಭ: ಸಚಿವ ಸುರೇಶ್ ಕುಮಾರ್

ಸಂವೇದ ಇ-ಕ್ಲಾಸ್ ಪಾಠ ಸರಣಿಯು ಇದೇ ಅಕ್ಟೋಬರ್ 12ರಿಂದ ಪ್ರಾರಂಭವಾಗಲಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

suresh kumar
ಸುರೇಶ್ ಕುಮಾರ್
author img

By

Published : Oct 7, 2020, 5:22 PM IST

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸಂವೇದ ಇ-ಕ್ಲಾಸ್ ಪಾಠ ಸರಣಿಯ ಎರಡನೇ ಅವಧಿ ಇದೇ ಅಕ್ಟೋಬರ್ 12ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ 5, 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವಿಡಿಯೋ ಪಾಠಗಳು DSERT ಜ್ಞಾನದೀಪ ಮತ್ತು ಮಕ್ಕಳವಾಣಿ ಯುಟ್ಯೂಬ್ ಚಾನೆಲ್‍ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಇಷ್ಟರಲ್ಲಿಯೇ ಈ ತರಗತಿಗಳು ದೂರದರ್ಶನದ ಚಂದನ ವಾಹಿನಿಯಲ್ಲಿಯೂ ಮರು ಪ್ರಸಾರಗೊಳ್ಳಲಿವೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳನ್ನು ಆರಂಭಿಸಬೇಕಿದ್ದೂ, ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸ್ತುತ ದೂರದರ್ಶನ ಚಂದನವಾಹಿನಿಯಿಂದ ಪ್ರತಿ ದಿನ 4 ಘಂಟೆ ಅವಧಿಯಲ್ಲಿ ಪ್ರಥಮ ಹಂತದಲ್ಲಿ ಪ್ರೌಢಶಾಲೆಯ 8 ರಿಂದ 10ನೆಯ ತರಗತಿಯ ಮಕ್ಕಳಿಗೆ ವಿಡಿಯೋ ಪಾಠ ತಯಾರಿಸಿ ಪ್ರಸಾರ ಮಾಡಲಾಗುತ್ತಿದ್ದು, ಸಮಯ ಲಭ್ಯತೆ ಆಧಾರದಲ್ಲಿ ಉಳಿದ ತರಗತಿಗಳ ಪಾಠ ಪ್ರಸಾರವಾಗಲಿದೆ ಎಂದು ಅವರು ಹೇಳಿದ್ದಾರೆ.

ಇಲಾಖೆಯ ಎಲ್ಲಾ ಹಂತದ ಶಿಕ್ಷಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಯೂಟ್ಯೂಬ್‍ಗಳಲ್ಲಿ ಮಕ್ಕಳು ಪಾಠ ವೀಕ್ಷಿಸುವಂತೆ ಗಮನ ಹರಿಸಿ ಮೇಲ್ವಿಚಾರಣೆ ಮಾಡಲು ಸೂಚಿಸಿದೆ. ಪೋಷಕರು ಮಕ್ಕಳು ಪಾಠ ವೀಕ್ಷಿಸಲು ಪ್ರೋತ್ಸಾಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸುರೇಶ್ ಕುಮಾರ್ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.