ETV Bharat / state

KPSC Recruitment: 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ.

Commercial Tax Inspector Recruitment Notification By KPSC

author img

By ETV Bharat Karnataka Team

Published : Aug 29, 2023, 4:45 PM IST

ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿ ನಡೆಯಲಿದೆ. ಒಟ್ಟು 230 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಗ್ರೂಪ್​ ಸಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪಡೆದಿರಬೇಕು. ಪದವಿಯಲ್ಲಿ ಒಂದು ವಿಷಯ ಅರ್ಥಶಾಸ್ತ್ರ ಅಥವಾ ಗಣಿತವನ್ನು ಅಧ್ಯಯನ ಮಾಡಿರಬೇಕು. ಅಥವಾ ಕಾಮರ್ಸ್​​ ಪದವಿಯನ್ನು ಅಧ್ಯಯನ ಮಾಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ 18 ವರ್ಷವಾಗಿದ್ದು, ಗರಿಷ್ಠ ವಯೋಮಿತಿ 35ವರ್ಷ ಆಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಈ ಹುದ್ದೆಗಳಿಗೆ ಮಾಸಿಕ 33,450 ರೂನಿಂದ 62,600 ರೂ. ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ಮಾಜಿ ಸೇವಾ ಅಭ್ಯರ್ಥಿಗಿಗೆ 50 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ವಿಧಿಸಲಾಗಿದೆ.

ಆಯ್ಕೆ: ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

ಈ ಹುದ್ದೆಗಳಿಗೆ ಸೆಪ್ಟೆಂಬರ್​ 1ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ. ಈ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ತಾತ್ಕಾಲಿಕ ದಿನಾಂಕ ನವೆಂಬರ್​ 4 ಮತ್ತು 5 ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ: ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿದೆ ಉದ್ಯೋಗ; ನರ್ಸ್​ ಸೇರಿದಂತೆ 77 ಹುದ್ದೆಗಳಿಗೆ ನೇಮಕಾತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.