ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ನಿಯಂತ್ರಣ ಮಾಡಲು ನೂತನ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನಗರದಲ್ಲಿ ರಾತ್ರಿ ಗಸ್ತು ತಿರುಗಿ ಮಧ್ಯರಾತ್ರಿಯಲ್ಲಿ ತಿರುಗಾಡ್ತಿದ್ದ ರೋಡ್ ರೋಮಿಯೋಗಳಿಗೆ, ಬೈಕ್ ಸವಾರರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್, ಹೆಬ್ಬಾಳ, ಮಲ್ಲೇಶ್ವರಂ, ಬಾಣಸವಾಡಿ, ರಾಜಾಜಿನಗರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಿಗೆ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಸರಿಯಾಗಿ ಕೆಲಸ ನಿರ್ವಹಿಸದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿ ಅವರು, ವಾರದಲ್ಲಿ ಒಮ್ಮೆ ವಿಶೇಷ ಕಾರ್ಯಚರಣೆ ಮಾಡುತ್ತೇವೆ. ರಾತ್ರಿ ಸಮಯದಲ್ಲಿ ಪೊಲೀಸರು ಇದ್ದಾರೆ ಎಂಬ ಧೈರ್ಯ ಸಾರ್ವಜನಿಕರಿಗೆ ಇರಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.