ಬೆಂಗಳೂರು: ನಗರದಲ್ಲಿರುವ ಕೊರೊನಾ ವಾರಿಯರ್ಸ್ಗೆ ಅಪಾರ್ಟ್ಮೆಂಟ್, ಸ್ಥಳೀಯ ನಿವಾಸಿಗಳು ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಗರದಲ್ಲಿ ಸೋಂಕಿತರನ್ನು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಆಗ ಕೊರೊನಾ ವಾರಿಯರ್ಸ್ ತಮ್ಮ ಅಳಲು ತೋಡಿಕೊಂಡು, ನಮಗೆ ಅಪಾರ್ಟ್ಮೆಂಟ್ಗಳಲ್ಲಿ ಲಿಫ್ಟ್ ಬಳಸುವುದಕ್ಕೆ ಅವಕಾಶ ನೀಡುತ್ತಿಲ್ಲ. ಕಸ ಸಂಗ್ರಹದ ಡಸ್ಟ್ ಬಿನ್ ಬಳಸುವುದಕ್ಕೂ ಬೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ಟೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ರೆಸಿಡೆನ್ಸಿ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರು ಈ ಬಗ್ಗೆ ಗಮನ ಹರಿಸಬೇಕು. ಕೊರೊನಾ ವಾರಿಯರ್ಸ್ಗಳನ್ನು ಈ ರೀತಿ ನಡೆಸಿಕೊಳ್ಳದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.