ಬೆಂಗಳೂರು: ವಿವಿಧ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ಪಶ್ಚಿಮ ವಿಭಾಗ ಪೊಲೀಸ್ ತಂಡಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1.15 ಲಕ್ಷ ರೂ. ನಗದು ಬಹುಮಾನ ವಿತರಿಸಿದರು.
ವಿವಿಧ ಪ್ರಕರಣಗಳನ್ನು ತನಿಖೆ ನಡೆಸಿದ್ದ ಪಶ್ಚಿಮ ವಿಭಾಗದ ಪೊಲೀಸ್ ತಂಡ, ಸುಮಾರು 1.5 ಕೋಟಿ ರೂ. ಮೌಲ್ಯದ 2.9 ಕೆ.ಜಿ ಚಿನ್ನಾಭರಣ, 1.5 ಕೆ.ಜಿ ಬೆಳ್ಳಿ ಮತ್ತು 13 ಪಿಸ್ತೂಲು, 52 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿ
ನಿನ್ನೆ (ಮಾರ್ಚ್1) ಸುದ್ದಿಗೋಷ್ಠಿ ನಡೆಸಿದ್ದ ಪೊಲೀಸ್ ಆಯುಕ್ತ ವಶಪಡಿಸಿಕೊಂಡಿದ್ದ ವಸ್ತುಗಳ ಬಗ್ಗೆ ಮಾಹಿತಿ ನೀಡಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಯನ್ನು ಶ್ಲಾಘಿಸಿದ್ದರು.