ETV Bharat / state

ನಾನು ಪಕ್ಷ ಸಂಘಟನೆಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ.. ಮಲ್ಲಿಕಾರ್ಜುನ ಖರ್ಗೆ - ಪ್ರತಿಪಕ್ಷ ನಾಯಕ

ಜಿಲ್ಲಾ ಕಾಂಗ್ರೆಸ್ ಸಮಿತಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಜೊತೆಗೆ ಶಾಸಕನಾಗಿ, ಪ್ರತಿಪಕ್ಷ ನಾಯಕನಾಗಿಯೂ ಇಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ನಾನು ಚುನಾವಣೆಗೆ ನಿಂತಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Mallikarjuna Kharge
ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ
author img

By

Published : Oct 16, 2022, 3:48 PM IST

Updated : Oct 16, 2022, 5:04 PM IST

ಬೆಂಗಳೂರು: ನಾನು ಪಕ್ಷದ ಸಂಘಟನೆಗಾಗಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿಂತಿದ್ದೇನೆ. ಹಿರಿಯ ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ಕಣಕ್ಕಿಳಿದಿದ್ದೇನೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್​ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಗಾಂಧಿ ಕುಟುಂಬದವರು ನಾವು ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಅಂತಾ ಹೇಳಿದ ಮೇಲೂ ನಾನು ಸ್ಪರ್ಧೆ ಮಾಡಬೇಕು ಎಂದು ಆಸಕ್ತಿ ತೋರಿಸಿರಲಿಲ್ಲ. ಆದರೆ ನಮ್ಮ ಪಕ್ಷದ ಹಿರಿಯ ನಾಯಕರು, ಪ್ರತಿನಿಧಿಗಳು ತಾವು ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ಕಳೆದ 55 ವರ್ಷಗಳಿಂದ ತಾವು ಪಕ್ಷ ಸಂಘಟನೆ, ಪಕ್ಷವನ್ನು ನೋಡಿದ್ದೀರಿ. ಜೊತೆಗೆ ಗಾಂಧಿ ಕುಟುಂಬದವರು ಚುನಾವಣೆಗೆ ನಿಲ್ಲುತ್ತಿಲ್ಲ. ಹೀಗಾಗಿ ಚುನಾವಣೆಗೆ‌ ನೀವು ನಿಲ್ಲಬೇಕು ಎಂದು ಹೇಳಿದ್ದರು. ನಾನು ಅವರೆಲ್ಲರ ಪರವಾಗಿ ಚುನಾವಣೆಗೆ ನಿಂತಿದ್ದೇನೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ನಾನು ಕರ್ನಾಟಕದಲ್ಲಿಯೇ ಪ್ರಾಥಮಿಕ ಸದಸ್ಯತ್ವ ಪಡೆದು ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಜೊತೆಗೆ ಶಾಸಕನಾಗಿ, ಪ್ರತಿಪಕ್ಷ ನಾಯಕನಾಗಿಯೂ ಇಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ನಾನು ಚುನಾವಣೆಗೆ ನಿಂತಿದ್ದೇನೆ. ಎಲ್ಲರೂ ನನಗೆ ಬೆಂಬಲ ಕೊಡುವಂತೆ ಮನವಿ ಮಾಡುವುದು ನನ್ನ ಧರ್ಮ. ನನಗೆ ಬೆಂಬಲ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಏಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ನನಗೆ ಮತ ನೀಡುವಂತೆ ಎಲ್ಲರಲ್ಲಿಯೂ ವಿಶೇಷ ಮನವಿ ಮಾಡುತ್ತಿದ್ದೇನೆ ಎಂದರು.

ರಾಜ್ಯಕ್ಕೆ ಬರುವ ಕಾರ್ಯಕ್ರಮ ಇರಲಿಲ್ಲ. ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಬೇಕು ಎಂದು ಬಂದೆ. ಬಳ್ಳಾರಿಯಲ್ಲಿ ಸಮಾವೇಶ ಯಶಸ್ವಿಯಾಯಿತು. ಕಲ್ಯಾಣ ಕರ್ನಾಟಕಕ್ಕೆ‌ ಆರ್ಟಿಕಲ್ಸ್ 371 ಜೇ ಕಲಂ ಜಾರಿ ಮಾಡಿಸಿದ್ದೇವೆ. 380 ಸಂಸದರ ಬೆಂಬಲ ಬೇಕಿತ್ತು. ಸೋನಿಯಾ ಗಾಂಧಿ ಅವರು ಸಪೋರ್ಟ್​ನಿಂದ 371 ಕಲಂ ಜಾರಿ ಆಗಿದೆ. ಆದ್ದರಿಂದ ಬಳ್ಳಾರಿ ಸಮಾವೇಶದಲ್ಲಿ ಭಾಗಿಯಾಗಿದ್ದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮತ್ತೋರ್ವ ಅಭ್ಯರ್ಥಿ ಶಶಿ ತರೂರ್​ಗೆ ಯಾವ ಸಂದೇಶ ಕೊಡುತ್ತೀರಿ ಎಂಬ ಪ್ರಶ್ನೆಗೆ, ನಾನು ಅವರಿಗೆ ಏನೂ ಹೇಳುವುದಿಲ್ಲ. ಅದು ನಮ್ಮ ಮನೆಯಲ್ಲಿನ ವಿಚಾರ ಮನೆಯೊಳಗೆ ಚರ್ಚಿಸುತ್ತೇವೆ. ಇಲ್ಲಿ ಆ ಬಗ್ಗೆ ಏನೂ ಹೇಳುವುದಿಲ್ಲ ಎಂದು ಹೇಳಿದರು.

ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗುತ್ತಾರೆ ಎಂಬ ಆರೋಪ ಇದೆಯಲ್ಲಾ ಎಂಬ ಪ್ರಶ್ನೆಗೆ, ಬಿಜೆಪಿಯವರಿಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ಏನೇನೊ ಮಾತನಾಡುತ್ತಾರೆ. ಆ ಕುಟುಂಬದವರು ಈ ದೇಶಕ್ಕೆ ಬಹಳಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ನಂತರ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಬಹುಮತ ಬಂದಾಗಲೂ ಸೋನಿಯಾ ಗಾಂಧಿ ಅಧಿಕಾರ ಅನುಭವಿಸಲಿಲ್ಲ. ಅವರ ಸಲಹೆಯಿಂದ ನಮ್ಮ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ನಿಮ್ಮ ಸಲಹೆಯನ್ನೂ ನೀವು ಕೊಡಬಹುದು. ಹೀಗಾಗಿ ಅವರ ಸಲಹೆ ಪಡೆಯುವುದು ನನ್ನ ಕರ್ತವ್ಯ. ನಾನು ಅವರ ಸಲಹೆಗಳನ್ನು ಪಡೆಯುತ್ತೇನೆ ಎಂದರು.

ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನದ ಪ್ರಕಾರ ನಡೆದುಕೊಳ್ಳುವ ಸೌಜನ್ಯವನ್ನು ಅವರು ತೊರಿಸುತ್ತಿಲ್ಲ. ಅವರು ಸಂವಿಧಾನಕ್ಕೆ ಗೌರವ ಕೊಡುತ್ತಿಲ್ಲ. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಾರೆ. ರಾಜ್ಯಸಭೆಯಲ್ಲಿಯೂ ಅವರಿಗೆ ಬಹುಮತ ಇರಲಿಲ್ಲ. ಅಲ್ಲಿಯೂ ಕೂಡ ಹೆದರಿಸಿ ಬೆದರಿಸಿ ಅವರು ಬಹುಮತ ಮಾಡಿಕೊಂಡಿದ್ದಾರೆ. ಸಂವಿಧಾನ ಉಳಿಸಲು ಕಾಂಗ್ರೆಸ್ ಪಕ್ಷ ಬೇಕು. ನಾಬೊಬ್ಬನೆ ಅಲ್ಲ, ನಾವೆಲ್ಲರೂ ಗಟ್ಟಿಯಾಗಿ ನಿಲ್ಲಬೇಕು. ದುರ್ಬಲ ವರ್ಗದವರಿಗೆ ಇದ್ದ ಸರ್ಕಾರಿ ಕೆಲಸಗಳನ್ನು ಕಡಿಮೆ ಮಾಡಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇವೆಲ್ಲವನ್ನು ಎದುರಿಸಬೇಕಿದೆ. ನಾನು ಹಿಂದಿನಿಂದಲೂ ಹೋರಾಟಗಳನ್ನು ಮಾಡುತ್ತಲೇ ಬಂದಿದ್ದೇನೆ. ನಾವು ಗಟ್ಟಿಯಾಗಿ ನಿಂತು ಸಂಘಟನೆಗೆ ಶಕ್ತಿ ಕೊಡಬೇಕು ಎಂದು ನನ್ನನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಆಗುವುದರಿಂದ ಕರ್ನಾಟಕಕ್ಕೆ ಆಗುವ ಪರಿಣಾಮ ಏನು ಎಂಬ ಪ್ರಶ್ನೆಗೆ, ಎಲ್ಲವನ್ನೂ ನಾನೇ ಮಾಡುತ್ತೇನೆ ಎಂಬುದಲ್ಲ. ಈಗಾಗಲೇ ನಮ್ಮ ನಾಯಕರು ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತಿದ್ದಾರೆ. ನಾನು ಇವತ್ತು ಕಾಂಗ್ರೆಸ್​ಗೆ ಬಂದಿಲ್ಲ, 55 ವರ್ಷದಿಂದ ಇಲ್ಲಿದ್ದೇನೆ. ನಾನು ಪಕ್ಷಕ್ಕಾಗಿ ಇದ್ದೇನೆ, ನನಗಾಗಿ ಪಕ್ಷ ಇಲ್ಲ. ನನ್ನಂಥವರು ಬಹಳಷ್ಟು ಜನರು ಪಕ್ಷದಲ್ಲಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಸಹಕಾರ ನೀಡುತ್ತಿಲ್ಲ ಎಂಬ ಶಶಿ ತರೂರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಾನು ಹಾಗೂ ನನ್ನ ಚುನಾವಣಾ ಪ್ರಚಾರದ ಅಧಿಕಾರಿಗಳು ನನ್ನ ಪರವಾಗಿ ಸಂಘಟನೆ ಮಾಡುತ್ತಿದ್ದಾರೆ. ನಮ್ಮ ಬಳಿ ಬಂದವರನ್ನು ಬೇರೆಯವರ ಜೊತೆ ಕಲಿಸಲು ಆಗುತ್ತದೆಯೇ? ನನಗೆ ಹಲವು ಹಿರಿಯ ನಾಯಕರು ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷೆ ಮಾಡಿಲ್ಲದಿದ್ದರೂ ನನಗೆ ಬೆಂಬಲ ನೀಡಿದ್ದಾರೆ. ನನಗೆ ಸಂಪುಟ ಸ್ಥಾನಮಾನಕ್ಕಿಂತ ಸಂಘಟನೆಯೇ ಮುಖ್ಯ. ನಾನು 50 ವರ್ಷಗಳಲ್ಲಿ ಎಲ್ಲವೂ ಒಂದೊಂದಾಗಿ ಸಿಕ್ಕಿದೆ. ಎಲ್ಲರಿಗೂ ನಾನು ಏನು ಎಂದು ಗೊತ್ತಿದೆ. ಹಾಗೆಂದು ಇನ್ನೊಬ್ಬರನ್ನು ನಾನು ಟೀಕಿಸುವುದಿಲ್ಲ. ಅವರ ಹೇಳಿಕೆ ಅವರದ್ದಾಗಿದೆ ಎಂದು ತಿಳಿಸಿದರು.

2019ರ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದವರಿಗೆ ಏನು ಹೇಳಬಯಸುತ್ತೀರಿ ಎಂದು ಕೇಳಿದಾಗ, ನಾನು ಎಂದಿಗೂ ಯಾವುದೇ ಸ್ಥಾನ ಬಯಸಿರಲಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ, ಈ ಅವಕಾಶವನ್ನು ನಿರೀಕ್ಷೆ ಮಾಡಿರಲಿಲ್ಲ. 1994ರಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಬಿದ್ದ ನಂತರ ವಿರೋಧ ಪಕ್ಷದ ನಾಯಕ ಆಗುತ್ತೇನೆ ಎಂದು ನಿರೀಕ್ಷೆ ಮಾಡಿರಲಿಲ್ಲ. 2008ರಲ್ಲಿ ಶಾಸಗಾಂಗ ಪಕ್ಷದ ನಾಯಕನಾಗಿದ್ದೆ. ನಾನು ಪಕ್ಷಕ್ಕಾಗಿ ಇದ್ದೇನೆ ಹೊರತು ಬೇರೆ ವಿಚಾರಕ್ಕೆ ಅಲ್ಲ. ನನ್ನಂತಹ ಹಲವರು ಪಕ್ಷದಲ್ಲಿ ಇದ್ದಾರೆ. ಹೀಗಾಗಿ ಪಕ್ಷ ಯಾವ ಜವಾಬ್ದಾರಿ ನೀಡುತ್ತದೆಯೋ ಅದರಂತೆ ನಡೆಯುತ್ತೇನೆ. ನನಗೆ ಯಾರೂ ವಿರೋಧಿಗಳಿಲ್ಲ ಎಂದರು.

ಪಕ್ಷದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಣದ ಜತೆ ಖರ್ಗೆ ಅವರ ಬಣ ಬರುತ್ತದೆಯೇ ಎಂದು ಕೇಳಿದಾಗ, ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾವೆಲ್ಲರೂ ಸಮಾನರು. ಒಗ್ಗಟ್ಟಿದ್ದರೆ ನಮ್ಮ ಸರ್ಕಾರ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆತಂಕವಾದಿ, ನಕ್ಸಲ್​ವಾದದ ಮೂಲಕ ಕಾಂಗ್ರೆಸ್ ದೇಶ​ ಒಡೆದಿದೆ: ಅರುಣ್​​ ಸಿಂಗ್​

Last Updated : Oct 16, 2022, 5:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.