ಬೆಂಗಳೂರು: ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್. ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಇದೀಗ ಅತೃಪ್ತ ಶಾಸಕರ ರಾಜೀನಾಮೆಯಿಂದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇದೇ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಸರ್ಕಾರದ ಕೆಲ ವ್ಯಕ್ತಿಗಳು ಲೋಕೋಪಯೋಗಿ ಇಲಾಖೆಯಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದ 800 ಜನ ಇಂಜಿನಿಯರ್ಸ್ಗಳನ್ನ 500 ಕೋಟಿ ಹಣ ಪಡೆದು ವರ್ಗಾವಣೆ ಮಾಡಿದ್ದಾರೆ. ಈ ಇಂಜಿನಿಯರ್ಗಳು 13 ತಿಂಗಳಿಂದ ವರ್ಗಾವಣೆಗಾಗಿ ಕಾಯುತ್ತಿದ್ದರು ಎಂದು ಎಂದು ಲಿಂಗಮೂರ್ತಿ ಆರೋಪಿಸಿದ್ದಾರೆ.
ಇಂಜಿನಿಯರ್ಗಳು ವರ್ಗಾವಣೆಗೆ ಕಾಯುತ್ತಿರುವ ಸಮಯದಲ್ಲಿ ಹೆಚ್.ಡಿ. ರೇವಣ್ಣ ಕೋಟಿ, ಕೋಟಿ ಹಣ ಪಡೆದು ವರ್ಗಾವಣೆ ಮಾಡಿದ್ದಾರೆ. ಸರ್ಕಾರ ಮಾಡಿರುವ ವರ್ಗಾವಣೆಯನ್ನ ವಾಪಸ್ ಪಡೆಯಬೇಕೆಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಲ್ಲಿಸಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.