ETV Bharat / state

ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಆರೋಪ: ನಟ ಚೇತನ್ ವಿರುದ್ಧ ದೂರು - Chethan post

ಸೋಷಿಯಲ್​ ಮೀಡಿಯಾ ಪೋಸ್ಟ್​ವೊಂದಕ್ಕೆ ಸಂಬಂಧಿಸಿದಂತೆ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ.

complaint against actor Chethan
ನಟ ಚೇತನ್ ಅಹಿಂಸಾ ವಿರುದ್ಧ ದೂರು
author img

By ETV Bharat Karnataka Team

Published : Dec 17, 2023, 1:23 PM IST

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇರೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಕೀಲ ಆರ್​ಎಲ್​ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೇತನ್ ಪೋಸ್ಟ್​​ನಲ್ಲೇನಿದೆ?

''ಇಬ್ಬರು ಯೋಧರ ಕಥೆ:

ಕೆಂಪೇಗೌಡ - ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ.

ಟಿಪ್ಪು ಸುಲ್ತಾನ್ - ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.

ದುರಾದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ / ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ'' ಎಂದು ನಟ ಚೇತನ್ ಅಹಿಂಸಾ ಅವರು ತಮ್ಮ ಸೋಷಿಯಲ್​ ಮೀಡಿಯಾ ಪ್ಲಾಟ್​​ಫಾರ್ಮ್​​ಗಳಲ್ಲಿ ಇತ್ತೀಚಿಗೆ ಪೋಸ್ಟ್ ಪ್ರಕಟಿಸಿದ್ದರು. ಇದರಿಂದಾಗಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ, ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್​ಎಲ್​ಎನ್ ಮೂರ್ತಿಯವರು ದೂರು ನೀಡಿದ್ದಾರೆ. ಅದರನ್ವಯ ಪೊಲೀಸರು ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕೆ ಭೂಮಿ ವಿಚಾರ: ದನಿಯೆತ್ತಿದ ಕಿಚ್ಚ, ಡಾಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.