ಬೆಂಗಳೂರು : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್, ಕಾಂಗ್ರೆಸ್ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ಜೂನ್ 7 ರಂದು ಫೇಸ್ ಬುಕ್ ಪೋಸ್ಟ್ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, "ಕಾಂಗ್ರೆಸ್ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದಿದ್ದಾರೆ. ಇದು ಸುಳ್ಳಾರೋಪವಾಗಿದೆ. ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸುಳ್ಳಾರೋಪ ಮಾಡಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕೈಗೊಳ್ಳುವಂತೆ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.