ETV Bharat / state

ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಜನತಾ ಪಕ್ಷ ಆಗ್ರಹ

ಬೌರಿಂಗ್ ಸಂಸ್ಥೆಯ ಡಾ. ಹೆಚ್​. ಎಂ ಶ್ರೀಕಾಂತ್ ವಿರುದ್ಧ ಕ್ರಮಕೈಗೊಳ್ಳುವಂತೆ ಜನತಾ ಪಕ್ಷ ಆಗ್ರಹಿಸಿದೆ.

ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ

author img

By ETV Bharat Karnataka Team

Published : Nov 10, 2023, 8:30 PM IST

Updated : Nov 11, 2023, 10:59 AM IST

ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆಂದು ಆರೋಪಿಸಿರುವ ಜನಾತ ಪಕ್ಷ, ಬೌರಿಂಗ್ ಸಂಸ್ಥೆಯ ಡಾ. ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಸಿದೆ.

ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಬೌರಿಂಗ್) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸದೆ ಡಿ ದರ್ಜೆ ನೌಕರರಂತೆ ಕಡತ ನಿರ್ವಹಣೆಯ ಕೆಲಸದಲ್ಲಿ ತೊಡಗಿದ್ದು, ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಇಲ್ಲಿ ಈಗಾಗಲೇ ವೈದ್ಯರ ಕೊರತೆ ಇದೆ. ಆದರೂ, ವೈದ್ಯಕೀಯ ಸೇವೆ ಬಿಟ್ಟು ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ ಕಡತಗಳ ನಿರ್ವಹಣೆಗೆ ಡಾ. ಹೆಚ್. ಎಂ ಶ್ರೀಕಾಂತ್ ಅವರನ್ನು ನೇಮಕ ಮಾಡಿರುವುದು ಸರಿಯಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೈದ್ಯರೊಬ್ಬರಿಗೆ ಕಡತ, ಆರ್ಥಿಕ ನಿರ್ವಹಣೆ ಜವಾಬ್ದಾರಿ ನೀಡಿರುವುದು ಅನುಮಾನಕ್ಕೆ ಕಾರಣವಾಗಿದ್ದು, 2020ನೇ ಸಾಲಿನಿಂದ ಇದುವರೆಗೂ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಬೌರಿಂಗ್)ನ ಕಡತಗಳನ್ನು ಪುನರ್ ಪರಿಶೀಲನೆ ನಡೆಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೇ, ಇತ್ತೀಚಿಗೆ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ವೈದ್ಯಕೀಯ ಸೇವೆ ಬಿಟ್ಟು ಬೇರೆ ವೃಂದಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾಗೇಶ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ ಬಗ್ಗೆ ಹೈಕೋರ್ಟ್ ತೀರ್ಪು, ಹಿಂದಿನ ಸಚಿವರಿಗೆ ಛೀಮಾರಿ ಹಾಕಿದಂತೆ: ಸಚಿವ ಪ್ರಿಯಾಂಕ್ ಖರ್ಗೆ

Last Updated : Nov 11, 2023, 10:59 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.