ಬೆಂಗಳೂರು: ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ ಎಂಬ ಪಕ್ಷದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾರೆಡ್ಡಿ ಎಂಬುವರು ದೂರು ಸಲ್ಲಿಸಿದ್ದಾರೆ.
ಸಚಿವ ಕೆ. ಗೋಪಾಲಯ್ಯ ಪ್ರತಿ ಜಿಲ್ಲೆಗಳಿಂದ 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಆಡಿಯೋ ಇತ್ತೀಚೆಗೆ ಎಲ್ಲೆಡೆ ವೈರಲ್ ಆಗಿದೆ. ಈ ಸಂಬಂಧ 4 ಜನ ಅಧಿಕಾರಿಗಳನ್ನು ಸಚಿವ ಕೆ. ಗೋಪಾಲಯ್ಯ ಅಮಾನತುಗೊಳಿಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಮಾಡುತ್ತಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಎಸಿಬಿಗೆ ರವಿಕೃಷ್ಣಾರೆಡ್ಡಿ ದೂರು ನೀಡಿದ್ದಾರೆ.