ETV Bharat / state

SSLC ಪರೀಕ್ಷೆ.. ಸಚಿವ ಸುರೇಶ್‌ಕುಮಾರ್ ವಿರುದ್ಧ ಸ್ಪೆಷಲ್ ಕೋರ್ಟ್​​​ಗೆ ದೂರು - complaint against minister suresh kumar

ಸಚಿವ ಸುರೇಶ್‌ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 304 ಮತ್ತು 107ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರೂ ಪೊಲೀಸರು ಮುಂದಿನ ಕ್ರಮ ಜರುಗಿಸಿಲ್ಲ. ಹೀಗಾಗಿ ಕೋರ್ಟ್ ಸಿಆರ್​​ಪಿಸಿ ಸೆಕ್ಷನ್ 156(3) ರಡಿ ಅಧಿಕಾರ ಚಲಾಯಿಸಿ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ಮತ್ತು ಮುಂದಿನ ಕಾನೂನು ಕ್ರಮಕೈಗೊಳ್ಳಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ..

suresh-kumar
ಸುರೇಶ್ ಕುಮಾರ್
author img

By

Published : Jun 23, 2020, 5:31 PM IST

ಬೆಂಗಳೂರು : SSLC ಪರೀಕ್ಷೆ ನಡೆಸಲೇಬೇಕೆಂದು ಪಣ ತೊಟ್ಟಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌ ಸುರೇಶ್‌ಕುಮಾರ್ ಅವರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಆರ್‌ ಅಯ್ಯರ್, ಬಿ ಕೆ ಪ್ರಕಾಶ್‌ಬಾಬು ಹಾಗೂ ವಿ ಬಿ ವಿಶ್ವನಾಥ್ ಅವರು ಸಚಿವ ಸುರೇಶ್‌ಕುಮಾರ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸಚಿವ ಸುರೇಶ್‌ಕುಮಾರ್ ವಿರುದ್ಧ ದೂರು ಸಲ್ಲಿಸಿದ್ರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಜೂನ್ 17 ರಂದು ಇ-ಮೇಲ್ ಮೂಲಕ ಮತ್ತು 18ರಂದು ನೇರವಾಗಿ ತೆರಳಿ ನಗರ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗದ ಡಿಸಿಪಿ ಹಾಗೂ ಹಲಸೂರು ಗೇಟ್ ಠಾಣೆ ಪೊಲೀಸರಿಗೆ ದೂರು ನೀಡಿದ್ದೆವು. ಪೊಲೀಸರು ದೂರು ಸ್ವೀಕರಿಸಿದ್ದರೂ ಈವರೆಗೆ ಎಫ್ಐಆರ್ ದಾಖಲಿಸಿಲ್ಲ ಎಂದು ನಮೂದಿಸಿದ್ದಾರೆ.

ಸಚಿವ ಸುರೇಶ್‌ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 304 ಮತ್ತು 107ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರೂ ಪೊಲೀಸರು ಮುಂದಿನ ಕ್ರಮ ಜರುಗಿಸಿಲ್ಲ. ಹೀಗಾಗಿ ಕೋರ್ಟ್ ಸಿಆರ್​​ಪಿಸಿ ಸೆಕ್ಷನ್ 156(3) ರಡಿ ಅಧಿಕಾರ ಚಲಾಯಿಸಿ ಪೊಲೀಸರಿಗೆ ಎಫ್ಐಆರ್ ದಾಖಲಿಸಲು ಮತ್ತು ಮುಂದಿನ ಕಾನೂನು ಕ್ರಮಕೈಗೊಳ್ಳಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಮಾತ್ರವೇ ಪರೀಕ್ಷೆಗಳನ್ನು ನಡೆಸುವ ಅಧಿಕಾರ ಮತ್ತು ಜವಾಬ್ದಾರಿಗಳಿವೆ. SSLC ಪರೀಕ್ಷೆಗಳನ್ನು ನಡೆಸುವುದು ಸಚಿವ ಸುರೇಶ್‌ಕುಮಾರ್ ಅವರ ಕೆಲಸವಲ್ಲ. ಹಾಗಿದ್ದರೂ ಸಚಿವರು ಉದ್ದೇಶಪೂರ್ವಕವಾಗಿ ಮತ್ತು ಬಲವಂತದಿಂದ ಮೇ18ರಂದು ಮಂಡಳಿ ಜೊತೆ ಸಭೆ ನಡೆಸಿ ಜೂನ್ 25ರಿಂದ ಜುಲೈ 4ರವೆಗೆ ಪರೀಕ್ಷಾ ದಿನಾಂಕಗಳನ್ನು ನಿಗದಿ ಮಾಡಿ 8.48 ಲಕ್ಷ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಅಪಾಯಕ್ಕೆ ತಳ್ಳುವ ಮೂಲಕ ಅಪರಾಧ ಎಸಗಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.