ಬೆಂಗಳೂರು: ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು ದಾಖಲಾಗಿದೆ. ಆರ್ಯ ಈಡಿಗ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಿದ ಆರೋಪದಡಿ ದೂರು ನೀಡಲಾಗಿದೆ.
ಅವರ ‘India After Gandhi’ ಕೃತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕೃತಿಯಲ್ಲಿ ಅವಹೇಳನಕಾರಿ ಅಂಶ ಪ್ರಸ್ತಾಪಿಸಿದ್ದಾರೆ. ಈ ಕೃತಿಯ ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು ನೀಡಿದ್ದೇವೆ. ರಾಮಚಂದ್ರ ಗುಹಾ ಅವರನ್ನು ಬಂಧಿಸಬೇಕು. ಜೊತೆಗೆ ಆ ಪುಸ್ತಕ ಮುಟ್ಟುಗೋಲು ಹಾಕುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಪ್ರಣವಾನಂದ ಸ್ವಾಮೀಜಿ ಮಾಧ್ಯಮಗಳಿಗೆ ತಿಳಿಸಿದರು.
ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.