ಬೆಂಗಳೂರು : ರಮೇಶ್ ಜಾರಕಿಹೊಳಿಯವರ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕರ್ನಾಟಕ ಕನ್ನಡ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಮೇಶ್ ಜಾರಕಿಹೊಳಿಯ ತೇಜೋವಧೆ ಮಾಡಲಾಗಿದೆ, ಇದೊಂದು ರಾಜಕೀಯ ಷಡ್ಯಂತ್ರ. ದಿನೇಶ್ ಕಲ್ಲಹಳ್ಳಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಅನ್ಯಾಯ ಆಗಿರುವುದು ಯುವತಿಗೆ, ಆದರೆ ಯುವತಿ ದೂರು ನೀಡಿಲ್ಲ. ಆ ವಿಡಿಯೋವನ್ನು ಸಂಪೂರ್ಣವಾಗಿ ಎಡಿಟ್ ಮಾಡಿಸಲಾಗಿದೆ ಎಂದು ಆಪಾದಿಸಿದ್ದಾರೆ.
ಓದಿ : ರಮೇಶ್ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಬಾಲಚಂದ್ರ ಜಾರಕಿಹೊಳಿ
ಎಡಿಟ್ ಮಾಡಿರುವ ವಿಡಿಯೊ ಮಾಡಿಸಿದ್ದು ಯಾರು..? ಆ ದೃಶ್ಯ ನೋಡಿದರೆ ಸಮ್ಮತಿ ಲೈಂಗಿಕ ಕ್ರಿಯೆ ಸಂಪರ್ಕ ತರ ಕಾಣುತ್ತಿದೆ. ಇದು ಬ್ಲಾಕ್ ಮೇಲ್ ರಾಜಕಾರಣವಾಗಿದೆ. ಈ ದಿಸೆಯಲ್ಲಿ ದಿನೇಶ್ ಕಲ್ಲಹಳ್ಳಿಯನ್ನು ತನಿಖೆಗೆ ಒಳಪಡಿಸಬೇಕಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.