ಬೆಂಗಳೂರು : ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೇರಿದಂತೆ ಜೆಡಿಎಸ್ ನಾಯಕರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಪ್ರಶಾಂತ್ ಸಂಬರಗಿ ವಿರುದ್ಧ ಜೆಡಿಎಸ್ನ ಕಾನೂನು ಘಟಕ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ನೀಡಿದೆ.
ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೇಗೌಡರ ಬಗ್ಗೆ ಮಾನಹಾನಿಕರ ಪೋಸ್ಟ್ ಹಾಕಿ ತೇಜೋವಧೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜೆಡಿಎಸ್ ನಾಯಕರ ಬಗ್ಗೆ ಅವಹೇಳನಕರ ಪೋಸ್ಟ್ ಪ್ರಕಟಿಸುತ್ತಿದ್ದಾರೆ. ಮಾತ್ರವಲ್ಲದೇ ಧರ್ಮಗಳ ನಡುವೆ, ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಪ್ರಶಾಂತ್ ಸಂಬರಗಿಯನ್ನು ಗಡಿಪಾರು ಮಾಡಬೇಕು, ಮತ್ತು ಅವರ ಸಾಮಾಜಿಕ ಜಾಲತಾಣದ ಖಾತೆಗಳನ್ನ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ. ಪಿ. ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿದಂತೆ ಹಲವರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರ ಬಳಿ ದೂರು ಸಲ್ಲಿಸಿದ್ದಾರೆ.
ಈ ಹಿಂದೆ ಪ್ರಶಾಂತ್ ವಿರುದ್ಧ ದೂರು ನೀಡಿದ್ದ ಫಿಲಂ ಚೇಂಬರ್: ಕರ್ನಾಟಕ ಫಿಲಂ ಚೇಂಬರ್ ವಿರುದ್ಧ ಅಧಾರವಿಲ್ಲದೆ ಪ್ರಶಾಂತ್ ಸಂಬರಗಿ ಅವರು ಅರೋಪ ಮಾಡ್ತಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಗಿನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ವಾಣಿಜ್ಯ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ ತೆರಳಿ ಆಗಿನ ನಗರ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು.
ಇದನ್ನೂ ಓದಿ : ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿಯಿಂದ ಎರಡು ಮೊಬೈಲ್, ಸಿಮ್ ಕಾರ್ಡ್ ಜಪ್ತಿ
ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣದಲ್ಲಿ ನಟ ಚೇತನ್ : ಇದೇ 21ರಂದು ನಟ ಚೇತನ್ ಅಹಿಂಸಾ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದರು. ಎಸಿಎಂಎಂ ಕೋರ್ಟ್‌ಗೆ ನಟ ಚೇತನ್ ಅವರನ್ನು ಹಾಜರುಪಡಿಸಲಾಗಿದ್ದು, ಅಂದು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ 32ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಪ್ರಕರಣ: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎಂದು ಹಿಂದೂಪರ ಕಾರ್ಯಕರ್ತ ಶಿವಕುಮಾರ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಮಂಗಳವಾರ ಬೆಳಗ್ಗೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ನಗರದ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದು. ಮಂಗಳವಾರ ನಟನಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದನ್ನೂ ಓದಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಸಿದ್ದಾಪುರದ ವ್ಯಕ್ತಿ ಆತ್ಮಹತ್ಯೆ