ETV Bharat / state

ರಾಜಕೀಯ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆ : ಚುನಾವಣಾ ಆಯೋಗಕ್ಕೆ ದೂರು - ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ದೂರು

ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಭಾಗವಹಿಸಿ ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ..

Complaints to Election Commission for violation of Electoral Code of Conduct by Political Parties
ಚುನಾವಣಾ ಆಯೋಗಕ್ಕೆ ದೂರು
author img

By

Published : Dec 6, 2020, 6:52 AM IST

ಬೆಂಗಳೂರು : ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ರಾಜಕೀಯ ಪಕ್ಷಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಗ್ರಾಮ ಪಂಚಾಯತ್ ಚುನಾವಣೆ ಯಾವುದೇ ಪಕ್ಷದ ಮೇಲೆ ನಡೆಯುವುದಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್‌ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇತ್ತೀಚೆಗೆ ಉಪಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥ್‌ ನಾರಾಯಣ ಅವರು ಪ್ರತಿ ಪಂಚಾಯತ್‌ಗೆ ವರ್ಷಕ್ಕೆ 4.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು. ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯತ್‌ ಬದಲು ಗ್ರಾಮ ಪಂಚಾಯತ್‌ಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

ಓದಿ:ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಗೆ ಯತ್ನ: ಬಿಎಸ್​ವೈ ವೇಗಕ್ಕೆ ಸ್ಪಂದಿಸದ ಹೈಕಮಾಂಡ್!

ಈ ಹೇಳಿಕೆ ಗ್ರಾಮ ಪಂಚಾಯತ್‌ ಚುನಾವಣೆ ಮೇಲೆ ಪ್ರಭಾವ ಬೀರಲಿದೆ. ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಭಾಗವಹಿಸಿ ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ ಎಂದು ಸಂಘಟನೆ ದೂರಿದೆ. ಇದರ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು ಎಂದು ಆಂದೋಲನದ ಸಂಚಾಲಕಿ ನಂದನರೆಡ್ಡಿ ಆಯೋಗಕ್ಕೆ ದೂರು ನೀಡಿ ಮನವಿ ಮಾಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.