ಬೆಂಗಳೂರು: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಕುಂದಲಹಳ್ಳಿ ಕೆಳಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಎಂಜಿನಿಯರ್ ರಮೇಶ್, ಹಾಗೂ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು. ಹಲವು ಸಮಯದಿಂದ ಈ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದರು.
ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡಲು, 36,000 ಚದರ ಅಡಿ ಜಾಗದ ಅಗತ್ಯವಿದ್ದು, ಈ ಭೂಮಿಯ 24 ಜನ ಮಾಲೀಕರಿಗೆ 42.5 ಕೋಟಿ ರೂ ಮುಂದಿನ ವಾರವೇ ಪಾವತಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ತಡೆಗೋಡೆ ನಿರ್ಮಾಣ ಕಾರ್ಯ ಮುಗಿದಿದೆ. ಡಿಸೆಂಬರ್ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಆಯುಕ್ತರು ಸೂಚನೆ ನೀಡಿದರು.