ETV Bharat / state

ಸ್ಪೀಕರ್​​ ಸ್ಥಾನಕ್ಕೆ ಕಾಗೇರಿ ಆಯ್ಕೆ ಖಚಿತ... ಹೆಗಡೆಯವರ ಹಿನ್ನೆಲೆ ಏನು ಗೊತ್ತಾ!? - ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಪರಿಚಯ

ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 12 ಗಂಟೆ ಕಡೆಯ ಸಮಯವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಸ್ಪೀಕರ್ ಸ್ಥಾನಕ್ಕೆ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಸಭಾಧ್ಯಕ್ಷ ಸ್ಥಾನಕ್ಕೆ ಕಾಗೇರಿ ಅವರು ಬಹುತೇಕ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಸಭಾಧ್ಯಕ್ಷ ಸ್ಥಾನಕ್ಕೆ ಕಾಗೇರಿ ಆಯ್ಕೆ
author img

By

Published : Jul 30, 2019, 2:15 PM IST

ಬೆಂಗಳೂರು: ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಕಾಗೇರಿ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಾಳೆ ನಡೆಯಲಿದೆ. ಸ್ಪೀಕರ್ ಚುನಾವಣೆಯಿಂದ ಕಾಂಗ್ರೆಸ್, ಜೆಡಿಎಸ್ ಹಿಂದೆ ಸರಿದಿದ್ದು, ಕಾಗೇರಿ ಅವರ ಅವಿರೋಧ ಆಯ್ಕೆ ಸುಲಭವಾಗಿದೆ.

ಅಭ್ಯರ್ಥಿ ಬದಲಾವಣೆ:
ಕೊನೆ ಕ್ಷಣದಲ್ಲಿ ಕೆ.ಜಿ.ಬೋಪಯ್ಯ ಅವರು ಸ್ಪೀಕರ್ ಆಗಲು ಹಿಂದೇಟು ಹಾಕಿದ ಕಾರಣ ಬಿಜೆಪಿ ವರಿಷ್ಠರು ಕಾಗೇರಿ ಅವರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದರು. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬೆಳಗ್ಗೆ 11.30ಕ್ಕೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 12 ಗಂಟೆ ಕಡೆಯ ಸಮಯವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಸ್ಪೀಕರ್ ಸ್ಥಾನಕ್ಕೆ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಕಾಗೇರಿ ಅವರು ಬಹುತೇಕ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ನಾಳೆ ವಿಧಾನಸಭೆಯಲ್ಲಿ ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರು ಅಧಿಕೃತವಾಗಿ ಕಾಗೇರಿ ಹೆಸರನ್ನು ಪ್ರಕಟಿಸಲಿದ್ದಾರೆ. ಈ ಮಧ್ಯೆ ಇಂದು ನಾಮಪತ್ರ ಸಲ್ಲಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ತಮ್ಮ ಮೇಲೆ ನಂಬಿಕೆ ಇಟ್ಟು ವರಿಷ್ಠರು ಸಭಾಧ್ಯಕ್ಷ ಸ್ಥಾನಕ್ಕೆ ತರಲು ಬಯಸಿದ್ದಾರೆ. ಅವರ ನಿರೀಕ್ಷೆಗೆ ಪೂರಕವಾಗಿ ಕೆಲಸ ಮಾಡುತ್ತೇನೆ ಎಂದರು.

ಸಭಾಧ್ಯಕ್ಷ ಸ್ಥಾನಕ್ಕೆ ಕಾಗೇರಿ ಆಯ್ಕೆ

ಕಾಗೇರಿ ಹಿನ್ನೆಲೆ:
1961, ಜುಲೈ 10ರಂದು ಜನಿಸಿದ ವಿಶ್ವೇಶ್ವರ ಅನಂತ ಹೆಗಡೆ ಕಾಗೇರಿ ಅವರು ಭಾರತಿ ಹೆಗಡೆ ಅವರನ್ನು ವರಿಸಿದ್ದಾರೆ. ಈ ದಂಪತಿಗೆ ಜಯಲಕ್ಷ್ಮಿ, ರಾಜಲಕ್ಷ್ಮಿ, ಶ್ರೀಲಕ್ಷ್ಮಿ ಎಂಬ ಮೂವರು ಪುತ್ರಿಯರಿದ್ದಾರೆ. ಕೃಷಿ ಕುಟುಂಬದಲ್ಲಿ ಬೆಳೆದಿದ್ದು, ತಂದೆ ಶ್ರೀ ಅನಂತ ಹೆಗಡೆಯವರು ಉತ್ತಮ ಕೃಷಿಕರು ಹಾಗೂ ಸಹಕಾರಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದರು. ತಾಯಿ ಸರ್ವೇಶ್ವರಿ ಗೃಹಿಣಿ. ಕಾಗೇರಿ ಅವರಿಗೆ ನಾಲ್ವರು ಸಹೋದರರು, ಇಬ್ಬರು ಸಹೋದರಿಯರು ಇದ್ದಾರೆ.

ಶಿರಸಿ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿ ಕಾರ್ಯಕರ್ತರಾಗಿ ಸಕ್ರಿಯರಾಗಿದ್ದರು. ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ರಾಜಕೀಯ ಹಿನ್ನೆಲೆ:
ಆರ್​​ಎಸ್​​ಎಸ್‍ನ ನಿಷ್ಠಾವಂತ ಕಾರ್ಯಕರ್ತನಾಗಿ 1981-82ರಲ್ಲಿ ಅಸ್ಸೋಂ ಉಳಿಸಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು. 1992-93 ರಲ್ಲಿ ಜಮ್ಮುವಿನಲ್ಲಿ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದರು. 1990ರಲ್ಲಿ ಸಕ್ರಿಯ ರಾಜಕೀಯ ಪ್ರವೇಶ ಮಾಡಿದರು. 1990-1994 ರವರೆಗೆ ಉತ್ತರ ಕನ್ನಡ ಜಿಲ್ಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅವರು, ನಂತರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಬಿಜೆಪಿಗೆ ಸೇರ್ಪಡೆಯಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಸತತ ಆರು ಬಾರಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾದ ನಂತರ ಶಿರಸಿ- ಸಿದ್ದಾಪುರ ಕ್ಷೇತ್ರದಿಂದ ಗೆದ್ದಿದ್ದರು. 1994ರಿಂದ ಸತತವಾಗಿ ಗೆದ್ದು ಬಂದಿರುವ ಕಾಗೇರಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನೆಂದೇ ಗುರುತಿಸಿಕೊಂಡಿದ್ದಾರೆ.

2006-07ರಲ್ಲಿ ಇದ್ದ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2008ರಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಮಿತವಾದ ಭಾಷೆ, ಸಂಸದೀಯ ವ್ಯವಸ್ಥೆ ಬಗ್ಗೆ ಜ್ಞಾನ, ಭಾಷೆಯ ಮೇಲೆ ಹಿಡಿತ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುಣಗಳು ಅವರಿಗಿದೆ. ಈ ಹಿಂದೆಯೂ ಕಾಗೇರಿಯವರು ಕೆಲವು ವಿಶೇಷ ಸಂದರ್ಭಗಳಲ್ಲಿ ಸ್ಪೀಕರ್ ಅವರ ಅನುಪಸ್ಥಿತಿಯಲ್ಲಿ ಕಲಾಪವನ್ನು ಮುನ್ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ.

Intro:ಬೆಂಗಳೂರು : ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದುವನಾಮಪತ್ರ ಸಲ್ಲಿಸಿದರು.

Body:ವಿಧಾನಸೌಧದಲ್ಲಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಕಾಗೇರಿ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಾಳೆ ನಡೆಯಲಿದೆ.
ಸ್ಪೀಕರ್ ಚುನಾವಣೆಯಿಂದ ಕಾಂಗ್ರೆಸ್, ಜೆಡಿಎಸ್ ಹಿಂದೆ ಸರಿದಿದ್ದು, ಕಾಗೇರಿ ಅವರ ಅವಿರೋಧ ಆಯ್ಕೆ ಸುಲಭವಾಗಿದೆ.
ನಾಳೆ ನೂತನ ಸ್ಪೀಕರ್ ಹೆಸರು ಘೋಷಣೆಯಾಗಲಿದೆ.
ನಸಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ವರಿಷ್ಠರು ಹಾಗೂ ನಮ್ಮ ನಾಯಕರು ಸೇರಿ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.
ನಾನು ನಿಷ್ಠಾವಂತನಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದರು.
ಕೆ.ಎಸ್. ಈಶ್ವರಪ್ಪ ಮಾತನಾಡಿ, ಸ್ವಯಂ ಸೇವಕರಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿರುವ ಕಾಗೇರಿ ಅವರು, ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಹೇಳಿದರು.
ಹಿಂದಿನ ಸಭಾಧ್ಯಕ್ಷರ ಮಾರ್ಗದರ್ಶನ ಪಡೆದು ಉತ್ತಮವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ ಎಂದು ಶುಭ ಹಾರೈಸಿದರು.
ಅದೇ ರೀತಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, ಮಾಧುಸ್ವಾಮಿ, ಗೋವಿಂದ ಕಾರಜೋಳ, ಮೇಲ್ಮನೆ ಸದಸ್ಯ ರವಿಕುಮಾರ್ ಸೇರಿದಂತೆ ಮತ್ತಿತರ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.