ETV Bharat / state

ಗಂಗಾ ಕಲ್ಯಾಣ: ಬಾಕಿ ಇರುವ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ - ಬಾಕಿ ಇರುವ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ

ಗಂಗಾ ಕಲ್ಯಾಣ ಯೋಜನೆ ಅಡಿ ಬಾಕಿ ಇರುವ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

complete-pending-applications-of-ganga-kalyan-in-two-months-says-chief-minister-siddaramaiah
ಗಂಗಾ ಕಲ್ಯಾಣ: ಬಾಕಿ ಇರುವ ಅರ್ಜಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ
author img

By ETV Bharat Karnataka Team

Published : Sep 13, 2023, 6:34 PM IST

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ವಿದ್ಯುದೀಕರಣದ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್‌ಫಾರ್ಮರ್​ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜೆಸ್ಕಾಂ ಮತ್ತು ಹೆಸ್ಕಾಂಗಳಲ್ಲಿ ಬಾಕಿ ಇರುವ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ ವೆಲ್‌ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್​ಗೆ ಭೂಮಿ ಒದಗಿಸುವಂತೆ ಎಷ್ಟು ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಸಿಎಂ ಆ ಅರ್ಜಿಗಳನ್ನು ಜೇಬಿನಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರಾ?. ಮೊದಲು ಆ ಎಲ್ಲ ಅರ್ಜಿಗಳ ಬೇಡಿಕೆ ಪೂರ್ಣಗೊಳಿಸಿ ಎಂದು ಸೂಚಿಸಿದರು.

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ : ಕಾವೇರಿ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ರೈತರ ಪರವಾಗಿ ಇರಬೇಕಾಗಿರುವುದು ನಮ್ಮ ಕರ್ತವ್ಯ. ಕೇಂದ್ರ ಸರ್ಕಾರದ ಬಳಿಗೆ ಸರ್ವ ಪಕ್ಷಗಳ ನಿಯೋಗ ಹೋಗಬೇಕೆಂದು ಹೇಳಿದ್ದೇವೆ. ಎಲ್ಲ ಎಂಪಿ ರಾಜ್ಯಸಭಾ ಸದಸ್ಯರಿಗೂ ಮನವಿ ಮಾಡಿದ್ದೇವೆ. ಎಲ್ಲ ಪಕ್ಷದ ಮಾಜಿ ಸಿಎಂಗಳಿಗೂ ಮನವಿ ಮಾಡಿದ್ದೇವೆ. ಅವರು ನಮ್ಮ ಜೊತೆ ನಿಲ್ಲುತ್ತೇವೆಂದು ಹೇಳಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನೀರಿಲ್ಲದೇ ಇರುವುದರಿಂದ ಸಿಡಬ್ಲ್ಯೂಎಂಎ ಮುಂದೆ ನಮ್ಮ ಪರಿಸ್ಥಿತಿಯನ್ನು ಮನವರಿಕೆ ಮಾಡಲು ಯೋಚನೆ ಮಾಡಿದ್ದೇವೆ. ಇವತ್ತು ನೀರು ಬಿಟ್ಟಿಲ್ಲ ಎಂಬುದು ನಿಮಗೂ ಗೊತ್ತಿದೆ. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ 53 ಟಿಎಂಸಿ ನೀರಿದೆ. ಕುಡಿಯೋದಕ್ಕೆ 73 ಟಿಎಂಸಿ ನೀರು ಬೇಕಾಗಿದೆ. ಸ್ಟಾಂಡಿಂಗ್ ಕ್ರಾಪ್​​​ಗೆ 70 ಟಿಎಂಸಿ ನೀರು ಬೇಕಾಗಿದೆ. ಈ ಎಲ್ಲ ಬಗ್ಗೆ ಸುಪ್ರೀಂ ಕೋರ್ಟ್ ಮುಂದೆ ಅರ್ಜಿಯನ್ನು ಸಲ್ಲಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ. ಈ ತೀರ್ಪನ್ನು ಮರುಪರಿಶೀಲನೆ ಮಾಡಲಿಕ್ಕೆ ಸಿಡಬ್ಲ್ಯೂಎಂಎ ಮುಂದೆ ಹೋಗುತ್ತಿದ್ದೇವೆ ಎಂದರು.

ತಮಿಳುನಾಡಿನ ರೀತಿಯಲ್ಲಿ ಸಮರ್ಥವಾಗಿ ವಾದ ಮಾಡುತ್ತಿಲ್ಲ ಎಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ವಾದ ಮಾಡುವುದಕ್ಕೋಸ್ಕರವಾಗಿಯೇ ನಮ್ಮ ಕಾನೂನು ತಂಡ ಇದೆ. 99 ಟಿಎಂಸಿ‌ ನೀರನ್ನು ಇಲ್ಲಿವರೆಗೂ ಬಿಡಬೇಕಾಗಿತ್ತು. ಆದರೆ ಇಲ್ಲಿವರೆಗೂ 37 ಟಿಎಂಸಿ ನೀರನ್ನು ಮಾತ್ರ ಬಿಟ್ಟಿದ್ದೇವೆ. ತಮಿಳುನಾಡು ಅವರು 24 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಸುಪ್ರೀಂಕೋರ್ಟ್ ಮುಂದೆ ಹೋಗಿದ್ದಾರೆ. ನಾವೆಲ್ಲರೂ ಸರಿಯಾಗಿ ವಾದ ಮಾಡದಿದ್ದರೆ ಅವರು ಹೋಗ್ತಾ ಇದ್ರಾ?. ನಾವು ರಾಜಕೀಯ ಮಾಡಲ್ಲ. ರೈತರ ಪರವಾಗಿ ಇರಬೇಕಾಗಿರೋದು ನಮ್ಮ ಕರ್ತವ್ಯ ಎಂದರು.

ಸಚಿವ ಹೆಚ್ ಕೆ ಪಾಟೀಲ್ ಮಾತನಾಡಿ, ಸಭೆಯಲ್ಲಿ ಕೆಲವೊಂದು ಸೂಚನೆ ಕೊಟ್ಟಿದ್ದಾರೆ. ಇವತ್ತು ಸರ್ವಪಕ್ಷಗಳ ಸಭೆ ನಡೆದಿದೆ. ಸೂಕ್ತವಾಗಿ ಎಲ್ಲರ ಜೊತೆ ಚರ್ಚೆ ನಡೆಸಲಾಯಿತು. ಉಪಮುಖ್ಯಮಂತ್ರಿ ಅವರು ಇಂದು ದೆಹಲಿಗೆ ಹೋಗುತ್ತಾರೆ. ಅಲ್ಲಿ ಕಾನೂನು ತಜ್ಞರು ಹಾಗೂ ಕಾನೂನು ತಂಡದ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.

ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾತನಾಡಿ, ಸಭೆಯಲ್ಲಿ ನಿರ್ಧಾರವಾಗಿರುವುದನ್ನು ಸಿಎಂ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಿದ್ದಾರೆ. ನಮ್ಮ ಲೀಗಲ್ ಟೀಮ್ ಜೊತೆ ಡಿಸಿಎಂ ಮಾತನಾಡುತ್ತಾರೆ. ಇದೆಲ್ಲಾ ಅನಿವಾರ್ಯ. ನಮ್ಮ ಹತ್ತಿರ ನೀರಿಲ್ಲ. ಸುಪ್ರೀಂ ಕೊರ್ಟ್ ಮುಂದೆ ಹೋಗಬೇಕು, ಕಾನೂನು ತಜ್ಞರ ತಂಡದ ಸಲಹೆ ಮೇಲೆ ಎಲ್ಲ ನಿರ್ಧಾರವಾಗುತ್ತದೆ ಎಂದರು.

ಇದನ್ನೂ ಓದಿ : ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿಲ್ಲ: ಕಾನೂನು ತಜ್ಞರ ಜತೆ ಚರ್ಚಿಸಿ ಸುಪ್ರೀಂಕೋರ್ಟ್​ಗೆ ಮನವಿ - ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.