ETV Bharat / state

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​: ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಏನೇನಾಯ್ತು.. ಇಲ್ಲಿದೆ ಕಂಪ್ಲೀಟ್ ವರದಿ - etv bharat karnataka

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ, ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್​ಗೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

complete-report-of-todays-karnataka-bandh-in-karnataka
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​: ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಏನೇನಾಯ್ತು ಎಂಬ ಕಂಪ್ಲೀಟ್ ವರದಿ ಇಲ್ಲಿದೆ..
author img

By ETV Bharat Karnataka Team

Published : Sep 29, 2023, 9:25 PM IST

Updated : Sep 29, 2023, 10:55 PM IST

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್​ಗೆ ಕಾವೇರಿ ಕೊಳ್ಳದ ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ಕೋಲಾರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ಚಿತ್ರನಟರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ರಸ್ತೆಗಿಳಿದು ಹೋರಾಟ ಮಾಡಿದರು. ಕಾರಣ ಮಂಡ್ಯ ಸಂಪೂರ್ಣ ಸ್ತಬ್ಧವಾಗಿತ್ತು. ನಟ, ನಿರ್ದೇಶಕ ಜೋಗಿ ಪ್ರೇಮ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಹಲವರು ಬಂದ್​ಗೆ ಬೆಂಬಲಿಸಿ ಹೋರಾಟದಲ್ಲಿ ಭಾಗಿಯಾಗಿದ್ದರು.

complete-report-of-todays-karnataka-bandh-in-karnataka
ಕಾವೇರಿ ನೀರಿಗಾಗಿ ನಡೆದ ಕರ್ನಾಟಕ ಬಂದ್​ಗೆ​ ಬೆಂಬಲಿಸಿ ಕಲಾವಿದರು

ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ರಸ್ತೆಗಿಳಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಬಂದ್​ಗೆ ಬೆಂಬಲ ನೀಡಿದರು. ಜೊತೆಗೆ ಖಾಸಗಿ ವಾಹನಗಳ ಸಂಚಾರ, ಬಸ್​ಗಳಲ್ಲಿನ ಜನರ ಓಡಾಟ ಭಾಗಶಃ ತಗ್ಗಿತ್ತು. ಪ್ರಯಾಣಿಕರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿದಿತ್ತು. ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಬಿಕೋ ಎನ್ನುತ್ತಿದ್ದವು.

ಮೆಟ್ರೋದಲ್ಲೂ ಇಲ್ಲ ಜನ ಸಂಚಾರ: ಪೆಟ್ರೋಲ್‌ ಬಂಕ್‌, ಮೆಡಿಕಲ್‌ ಶಾಪ್‌ಗಳು, ಆಸ್ಪತ್ರೆಗಳು, ಹಣ್ಣು ತರಕಾರಿ ಅಂಗಡಿ, ಬೇಕರಿಗಳು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದ್ದವು. ಆಟೋ, ಟ್ಯಾಕ್ಸಿ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು, ಬಂದ್​ಗೆ ಸ್ವಯಂ ಪ್ರೇರಿತರಾಗಿ ನಗರದ ಜನರು ಬೆಂಬಲ ನೀಡಿದ್ದರಿಂದ ಮೆಟ್ರೋದಲ್ಲೂ ಜನ ಸಂಚಾರ ಕಾಣಲಿಲ್ಲ.

ಕಾವೇರಿ ಹೋರಾಟದಲ್ಲಿ ಕನ್ನಡ ಚಿತ್ರರಂಗ ಭಾಗಿ

ಚಿತ್ರೋದ್ಯಮ ಬಂದ್: ಬೆಂಗಳೂರು ಬಂದ್​ಗೆ ಕನ್ನಡ ಚಿತ್ರೋದ್ಯಮ ಕೂಡ ಸಂಪೂರ್ಣ ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್ ಮಾಡಲಾಗಿತ್ತು. ಜತೆಗೆ ಎಲ್ಲ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತಗೊಂಡಿತ್ತು.

ಕಾವೇರಿ ನೀರಿಗಾಗಿ ಶಿವಮೊಗ್ಗ ಮತ್ತು ಬೆಳಗಾವಿ ನಡೆದ ಪ್ರತಿಭಟನೆ

ಕರ್ನಾಟಕ ಬಂದ್ ಶಾಂತಿಯುತ ಎಂದ ಆಯುಕ್ತರು: ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಬಂದ್ ಹಿನ್ನೆಲೆ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು. ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸೆಕ್ಷನ್ 144ರ ಅಡಿ ನಿಯಮ ಮೀರಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.

ತುಮಕೂರಿನಲ್ಲಿ ಶವಯಾತ್ರೆ ನಡೆಸಿ ಪ್ರತಿಭಟನೆ

ನ್ಯಾಯಾಲಯದ ಆದೇಶದಂತೆ ನಿಯಮ ಮೀರಿದ 785 ಜನರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಫ್ರೀಡಂ ಪಾರ್ಕ್​ನಲ್ಲಿ 1,500ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದ್ದಾರೆ. ನಗರದಾದ್ಯಂತ ಶುಕ್ರವಾರ ಬೆಳಗ್ಗೆ ವಾಹನ ಸಂಚಾರ ವಿರಳವಾಗಿತ್ತು. ಸಂಜೆಯಿಂದ ಎಂದಿನಂತೆ ವಾಹನ ಸಂಚಾರವಿತ್ತು. ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಒಟ್ಟಾರೆಯಾಗಿ ಬಂದ್ ಶಾಂತಿಯುತವಾಗಿ ಕೊನೆಗೊಂಡಿದೆ ಎಂದರು.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು

ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆ: ಸಾಂಸ್ಕೃತಿಕ ನಗರಿಯ ಮೈಸೂರಿನಲ್ಲಿಯೂ ಬಂದ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದವು. ನಗರದ ಹೋಟೆಲ್ ಮಾಲೀಕರು, ಆಟೋ ಚಾಲಕರ ಸಂಘ, ಲಾರಿ ಮಾಲೀಕರ ಸಂಘ, ವರ್ತಕರ ಸಂಘ, ಚಲನಚಿತ್ರ ಮಂದಿರ ಮಾಲೀಕರ ಸಂಘ, ಬೀದಿ ಬದಿ ವ್ಯಾಪಾರಿಗಳ ಸಂಘ, ಸೇರಿದಂತೆ ಬಹುತೇಕ ಸಂಘಟನೆಗಳು ಕರ್ನಾಟಕ ಬಂದ್​ಗೆ ಬೆಂಬಲ ಸೂಚಿಸಿದ್ದವು. ಇದರ ಜೊತೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ

ರಾಮನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರೈತರು, ಕನ್ನಡಪರ ಸಂಘಟನೆಗಳು, ದಲಿತಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ವಿವಿಧ ವೃತ್ತಗಳಲ್ಲಿ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಗುಂಡ್ಲುಪೇಟೆ ವೃತ್ತದಲ್ಲಿ ಎಂಪಿಗಳು, ಶಾಸಕರು, ಸಚಿವರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ನೃತ್ಯ ಮಾಡಿದರು.

ಬಂದ್​ ಹಿನ್ನೆಲೆ ಬಯಲು ಸೀಮೆ ಕೋಲಾರ ಜಿಲ್ಲೆ ಸಹ ಸ್ತಬ್ಧವಾಗಿತ್ತು. ಬೆಳಗ್ಗೆಯಿಂದ ಫೀಲ್ಡ್‌ಗಿಳಿದ ಹೊರಾಟಗಾರರು, ಟೈರ್‌ಗೆ ಬೆಂಕಿ ಹಾಕಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬೈಕ್​ ಜಾಥಾ ಮಾಡಿ ಬಲವಂತವಾಗಿ ಅಂಗಡಿ ಮುಗ್ಗಟ್ಟು ಮುಚ್ಚಿಸಿದ್ದು. ಕಂಡು ಬಂದಿತು. ವ್ಯಾಪಾರ ವಹಿವಾಟು, ಅಂಗಡಿ ಮುಗ್ಗಟ್ಟು, ಸಾರಿಗೆ ಸಂಚಾರ, ಖಾಸಗಿ ಶಾಲಾ ಕಾಲೇಜುಗಳು ರಜೆ ನೀಡುವ ಮೂಲಕ ಬಂದ್‌ಗೆ ಕೋಲಾರದ ಜನರು ಬೆಂಬಲ ಸೂಚಿಸಿದ್ದರು. ಇನ್ನು ಕೆಜಿಎಫ್, ಬಂಗಾರಪೇಟೆ, ಮಾಲೂರಲ್ಲಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಯಿತು.

ಹೊಸಪೇಟೆ ಸೇರಿ ಕೆಲವೆಡೆ ಬಂದ್​ಗೆ ನೀರಸ ಪ್ರತಿಕ್ರಿಯೆ: ಹೊಸಪೇಟೆ ಸೇರಿ‌ ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜಿಲ್ಲಾ ಕೇಂದ್ರ ವಿಜಯನಗರ ಸೇರಿ ಹೋಟೆಲ್, ಅಂಗಡಿ-ಮುಗ್ಗಟ್ಟು, ಪೆಟ್ರೋಲ್ ಬಂಕ್‌ ಸೇರಿದಂತೆ ಎಲ್ಲ ಉದ್ಯಮಗಳು ಎಂದಿನಂತೆ ಇದ್ದವು. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ಇರಲಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ಕಾರ್ಯನಿರ್ವಹಿಸಿದ್ದವು. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿತ್ತು.

ಕರ್ನಾಟಕ ಬಂದ್​ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬೆಳಗಿನಿಂದಲೂ ಅಂಗಡಿ‌ ಮುಗ್ಗಟ್ಟುಗಳು ಬಂದ್ ಆಗಿದ್ದವು. ರಸ್ತೆಗಿಳಿದ ಕೆಲ ಆಟೋಗಳನ್ನ ನಿಲ್ಲಿಸಿದ ಪ್ರತಿಭಟನಾಕಾರರು, ನಗರದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಭಾರಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಬಿಜೆಪಿ ನಾಯಕರು ಕೈಗೆ ಜೋಡಿಸಿದ್ದರು. ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಕೂಡ ನಡೆಸಲಾಯಿತು. ಕೆಎಸ್​ಆರ್​ಟಿಸಿ ಬಸ್​ ಬಸ್ ನಿಲ್ದಾಣದ ಮುಂಭಾಗ ಬೈಕ್ ಜಾಥಾ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲೂ ಬಂದ್​ ಅಷ್ಟಕ್ಕಷ್ಟೆ: ಬಾಗಲಕೋಟೆ ಜಿಲ್ಲೆಯಲ್ಲಿಯೂ ಇಂದಿನ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕನ್ನಡ ಪರ ಸಂಘಟನೆಗಳು, ದೇಸಾಯಿ ಚಿತ್ರ ತಂಡ ಹಾಗೂ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬಸವೇಶ್ವರ ಸರ್ಕಲ್‌ನಲ್ಲಿ ಬಂದ್ ಬೆಂಬಲಿಸಿ ಒರಟ ಖ್ಯಾತಿಯ ಪ್ರಶಾಂತ್​, ಲವ್ 360 ಖ್ಯಾತಿಯ ಪ್ರವೀಣ್ ಹಾಗೂ ಚಿತ್ರ ತಂಡದಿಂದ ಶೂಟಿಂಗ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಇನ್ನು ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಾತ್ರ ಯಾವುದೇ ಬಂದ್ ಇಲ್ಲವಾಗಿತ್ತು. ಸಂಘ, ಸಂಸ್ಥೆಗಳು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಬೆಂಬಲ ನೀಡಿರಲಿಲ್ಲ. ಇದರಿಂದ ಎಂದಿನಂತೆ ಜನಜೀವನ ನಡೆಯಿತು. ಬಂದ್​ಗೆ ಹುಬ್ಬಳ್ಳಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತು. ಗಡಿಜಿಲ್ಲೆ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿ ಬಂದ್​ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಕರ್ನಾಟಕ ಬಂದ್​ನಿಂದ 400 ಕೋಟಿಗಳಷ್ಟು ಸರ್ಕಾರದ ಬೊಕ್ಕಸಕ್ಕೆ ನಷ್ಟ: ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ

Last Updated : Sep 29, 2023, 10:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.