ETV Bharat / state

ಸಿಂಗಟಾಲೂರು ಏತ ನೀರಾವರಿ ಯೋಜನೆ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ: ಸಿಎಂ - ಬಹು ನಿರೀಕ್ಷಿತ ಸಿಂಗಟಾಲುರು ಏತ ನೀರಾವರಿ ಯೋಜನೆ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಅದರ ಬಗ್ಗೆ ಚರ್ಚಿಸಲಾಯಿತು.

ಸಿಂಗಟಾಲೂರು ಏತ ನೀರಾವರಿ ಯೋಜನೆ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ: ಸಿಎಂ

author img

By

Published : Jan 21, 2022, 11:52 PM IST

ಬೆಂಗಳೂರು: ಬಹು ನಿರೀಕ್ಷಿತ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಪ್ಯಾಕೇಜ್ 6 ರ ಟೆಂಡರ್​​​ನ್ನು ಮಾರ್ಚ್ 31ರೊಳಗೆ ಕರೆದು ಯೋಜನೆಯನ್ನು ಡಿಸೆಂಬರ್ ತಿಂಗಳಿನೊಳಗೆ ಪೂರ್ಣಗೊಳಿಸುವಂತೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏತ ನೀರಾವರಿ ಯೋಜನೆಯ ಪ್ಯಾಕೇಜ್ 6 ನ್ನು ಮರು ಅಂದಾಜು ಮಾಡಿ, ಮಧ್ಯಪ್ರದೇಶ ಮಾದರಿಯಲ್ಲಿ ಕಾಮಗಾರಿಯನ್ನು ಕೈಗೊಂಡು ರೈತರಿಗೆ ಅನುಕೂಲವಾಗಲು ನೇರವಾಗಿ ರೈತರ ಹೊಲದಲ್ಲಿಯೇ ಔಟ್‍ಲೆಟ್ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಹಾಗೆ ಕೊಪ್ಪಳ ಬ್ರಾಂಚ್ ಕಾಲುವೆ ಅಡಿಯಲ್ಲಿ ಬರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ತಿಳಿಸಿದರು.

ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಶಾಸಕ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.