ETV Bharat / state

ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ವಿಶೇಷ ರಿಯಾಯಿತಿ ಪ್ರಸ್ತಾವನೆ: ಸಚಿವ ಜಗದೀಶ್‌ ಶೆಟ್ಟರ್‌

author img

By

Published : Jun 2, 2021, 6:07 PM IST

ರಾಜ್ಯದಲ್ಲಿ ಹೊಸದಾಗಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿಯ ಪ್ರಸ್ತಾವನೆಯನ್ನು ಕೈಗಾರಿಕಾ ಇಲಾಖೆಯ ವತಿಯಿಂದ ರಚಿಸಲಾಗಿದ್ದು, ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಿಕೊಡಲಾಗಿದೆ ಎಂದು ಸಚಿವ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.

shetter
shetter

ಬೆಂಗಳೂರು: ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣ ಪ್ರಾರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ಪ್ರಸ್ತಾವನೆಯನ್ನು ರಚಿಸಲಾಗಿದೆ.

ಸದ್ಯ ಆರ್ಥಿಕ ಇಲಾಖೆಯ ಈ ಪ್ರಸ್ತಾವನೆಯನ್ನು ಪರಾಮರ್ಶೆಗೆ ಕಳುಹಿಸಲಾಗಿದೆ. ಆರ್ಥಿಕ ಇಲಾಖೆಯ ಅನುಮತಿಯ ನಂತರ ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡುವುದಾಗಿ ರಾಜ್ಯ ಆಮ್ಲಜನಕ ಸರಬರಾಜು ಮತ್ತು ಉತ್ಪಾದನೆ ಉಸ್ತುವಾರಿಯೂ ಆಗಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ರಾಜ್ಯ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ಲಜನಕದ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರ್ಕಾರದ ಸಹಕಾರದಿಂದ ಹಾಗೂ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆ ಆಗುತ್ತಿರುವ ನಿಟ್ಟಿನಲ್ಲಿ ಆಮ್ಲಜನಕದ ಬೇಡಿಕೆ ನಿಧಾನವಾಗಿ ತಗ್ಗುತ್ತಿದೆ. ತಜ್ಞರ ಅಂದಾಜಿನಂತೆ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

ಈ ಹಿನ್ನೆಲೆ ರಾಜ್ಯದಲ್ಲಿ ಹೊಸದಾಗಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿಯ ಪ್ರಸ್ತಾವನೆಯನ್ನು ಕೈಗಾರಿಕಾ ಇಲಾಖೆಯ ವತಿಯಿಂದ ರಚಿಸಲಾಗಿದ್ದು, ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಿಕೊಡಲಾಗಿದೆ. ಅಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಶೇಷ ವಿಶೇಷ ಸೌಲಭ್ಯದ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಾಗುವುದು ಎಂದು ಹೇಳಿದರು.

ಜಿಂದಾಲ್​ಗೆ ನೋಟಿಸ್‌:

ರಾಜ್ಯಕ್ಕೆ ನೀಡಬೇಕಾಗಿದ್ದ ದ್ರವೀಕೃತ ಆಮ್ಲಜನಕವನ್ನು ಜಿಂದಾಲ್‌ ನಿನ್ನೆ ನೀಡಿರಲಿಲ್ಲ. ಇದರಿಂದ ರಾಜ್ಯದಿಂದ ಲಭ್ಯವಾಗಬೇಕಾಗಿದ್ದ 830 ಎಂಟಿ ಗಳಲ್ಲಿ ನಮಗೆ ದೊರಕಿದ್ದು, ಕೇವಲ 386 ಎಂಟಿಗಳಷ್ಟು ಮಾತ್ರ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಮುಂದಿಟ್ಟು ಈ ಸಂಕಷ್ಟದ ಸಮಯದಲ್ಲಿ ಆಮ್ಲಜನಕ ನೀಡದೇ ಇರುವುದರ ಬಗ್ಗೆ ನಿನ್ನೆ ಜಿಂದಾಲ್​ಗೆ ನೋಟಿಸ್‌ ನೀಡಲಾಗಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ. ಇನ್ನು ಮುಂದೆ ಇಂತಹ ಘಟನೆಗಳು ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ರಾಜ್ಯದಲ್ಲಿನ ಆಮ್ಲಜನಕ ಘಟಕಗಳ ಸ್ಥಾಪನೆಯ ಕಾರ್ಯವನ್ನು ಚುರುಕುಗೊಳಿಸಿ:

ಕೇಂದ್ರ, ರಾಜ್ಯ ಮತ್ತು ಹಲವಾರು ಸಾರ್ವಜನಿಕ ಸಂಸ್ಥೆಗಳು ಘಟಕ ಸ್ಥಾಪನೆಗೆ ಮುಂದಾಗಿವೆ. ಆದರೆ, ಅದರ ಸ್ಥಾಪನೆ ಕಾರ್ಯಗಳನ್ನು ಚುರುಕುಗೊಳಿಸುವುದರತ್ತ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಬೇಕಾಗಿದೆ. ಹೊರಗಿನಿಂದ ಬರುವ ಆಮ್ಲಜನಕವನ್ನು ನಂಬಿಕೊಳ್ಳುವುದರ ಜೊತೆಯಲ್ಲಿಯೇ ಅವುಗಳು ಸ್ವತಃ ಆಮ್ಲಜನಕ ಉತ್ಪಾದನೆ ಮಾಡಿದಲ್ಲಿ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರೋಗ್ಯ ಇಲಾಖೆ ಜಾವೇದ್‌ ಆಖ್ತರ್‌, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್‌ ಅಧಿಕಾರಿ ಮೌನಿಶ್‌ ಮೌದ್ಗಿಲ್‌ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.