ETV Bharat / state

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ರಸ್ತೆಗುರುಳಿದ ಎತ್ತರದ ಪ್ರತಿಬಂಧಕ

ಕಾಂಕ್ರೀಟ್​ ಮಿಕ್ಸರ್​ ಲಾರಿ ಡಿಕ್ಕಿ ಹೊಡೆದು ಆನಂದರಾವ್ ಸರ್ಕಲ್ ಸಮೀಪದ ವಿವಿ ಗಿರಿ ಕಾಲೋನಿಯಲ್ಲಿರುವ ರೈಲ್ವೇ ಎತ್ತರ ಪ್ರತಿಬಂಧಕ ರಸ್ತೆಗುರುಳಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

author img

By

Published : Mar 29, 2023, 11:00 AM IST

concrete-mixer-lorry-hit-height-restriction-barrier-in-bengaluru
ಕಾಂಕ್ರೀಟ್ ಮಿಕ್ಸರ್ ಲಾರಿ ಢಿಕ್ಕಿಯಾಗಿ ರಸ್ತೆಗುರುಳಿದ ಎತ್ತರ ಪ್ರತಿಬಂಧಕ

ಬೆಂಗಳೂರು : ಭಾರಿ ಗಾತ್ರದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ರೈಲ್ವೆ ಪ್ರತಿಬಂಧಕಕ್ಕೆ ತಾಗಿದ ಪರಿಣಾಮ ಕಬ್ಬಿಣದ ಪ್ರತಿಬಂಧಕ ರಸ್ತೆಗೆ ಬಿದ್ದಿರುವ ಘಟನೆ ಇಂದು ಬೆಳಗ್ಗೆ ಆನಂದರಾವ್ ಸರ್ಕಲ್ ಸಮೀಪದ ವಿವಿ ಗಿರಿ ಕಾಲೋನಿ ಬಳಿ ನಡೆದಿದೆ. ಶೇಷಾದ್ರಿಪುರಂ ಸಮೀಪದ ವಿವಿ ಗಿರಿ ಕಾಲೋನಿ ಸಮೀಪ ರೈಲ್ವೇ ಮೇಲ್ಸೇತುವೆಯ ಕೆಳಗಿನ ಮಾರ್ಗದಲ್ಲಿ ಬೃಹತ್ ವಾಹನಗಳ ಸಂಚಾರ ತಡೆಗೆ ಪ್ರತಿಬಂಧಕ ಹಾಕಲಾಗಿತ್ತು. ಶೇಷಾದ್ರಿಪುರಂನಿಂದ ಗಾಂಧಿನಗರ ಮಾರ್ಗದಲ್ಲಿ ಸಾಗುತ್ತಿದ್ದ ಬೃಹತ್ ಗಾತ್ರದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ತಾಗಿದ್ದು ಪ್ರತಿಬಂಧಕ ರಸ್ತೆಗೆ ಉರುಳಿದೆ.

ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಶೇಷಾದ್ರಿಪುರಂ ಕಡೆಯಿಂದ ಗಾಂಧಿನಗರಕ್ಕೆ ತೆರಳುವ ಮಾರ್ಗದಲ್ಲಿ ಕೆಲಕಾಲ ವಾಹನಗಳ ಸಂಚಾರ ಸ್ಥಗಿತವಾಗಿತ್ತು. ಸ್ಥಳಕ್ಕೆ ಹೈಗ್ರೌಂಡ್ ಟ್ರಾಫಿಕ್ ಪೊಲೀಸರು ಆಗಮಿಸಿ ಪ್ರತಿಬಂಧಕ ತೆರವುಗೊಳಿಸಿದ್ದಾರೆ.

ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವು: ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹಳೆಯ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕಾರಿನಲ್ಲಿ ಮೊದಲು ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಕಾರಿನ ಬಳಿಗೆ ಬಂದು ನೋಡಿದ್ದು, ವ್ಯಕ್ತಿಯೊಬ್ಬ ಕಾರಿನೊಳಗೆ ಇರುವುದು ಪತ್ತೆಯಾಗಿದೆ. ಈ ವೇಳೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪರಿಶೀಲನೆ ಮಾಡಿದಾಗ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆನೇಕಲ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆನೇಕಲ್​ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಎಂದು ಗುರುತಿಸಲಾಗಿದೆ. ಬೇಗ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಆರೋಪಿಗಳು ಗಾಂಜಾ ಮಾರಾಟದಲ್ಲಿ ತೊಡಗಿದ್ದರು. ಬಂಧಿತ ಆರೋಪಿಗಳು ರಾಜ್ಯ ಮತ್ತು ಹೊರ ರಾಜ್ಯಗಳಿಂದ ಗಾಂಜಾವನ್ನು ತಂದು ಸಣ್ಣ ಸಣ್ಣ ಪ್ಯಾಕೆಟ್​​ ಮಾಡಿ ನಗರದ ಕಾಲೇಜಿನ ಬಳಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಅಲ್ಲದೆ ಅಯೋಧ್ಯೆ ನಗರದ ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಇರಿಸಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ ಮನೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 15 ಲಕ್ಷ ರೂ. ಮೌಲ್ಯದ 25 ಕೆ.ಜಿ ಗಾಂಜಾ ಪತ್ತೆಯಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದಾವಣಗೆರೆ: ₹7 ಲಕ್ಷ ಮೌಲ್ಯದ ಅಡುಗೆ ಸಲಕರಣೆ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.