ETV Bharat / state

ಮುಲಾಯಂ ಸಿಂಗ್‌ ಯಾದವ್​​ ನಿಧನ: ಸಿಎಂ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆಯಿಂದ ಸಂತಾಪ - Mulayam Singh Yadav

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಹಾಗೂ ಕಾಂಗ್ರೆಸ್​​ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Former Uttar Pradesh Chief Minister Mulayam Singh
ಮುಲಾಯಂ ಸಿಂಗ್‌ ಯಾದವ್​​ ನಿಧನ
author img

By

Published : Oct 10, 2022, 12:42 PM IST

ಬೆಂಗಳೂರು: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು. ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಷ್ಟ್ರವು ಮುತ್ಸದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

  • ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
    ಓಂ ಶಾಂತಿಃ pic.twitter.com/3hTf5zMMMt

    — Basavaraj S Bommai (@BSBommai) October 10, 2022 " class="align-text-top noRightClick twitterSection" data=" ">

ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬಿಎಸ್​ವೈ, ಕಟೀಲ್ ಸಂತಾಪ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇವೆ. ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಪಕ್ಷದ ಕಾರ್ಯಕರ್ತರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹೊರಟ್ಟಿ ಸಂತಾಪ: ಮುಲಾಯಂ ಸಿಂಗ್ ದೊಡ್ಡ ಹೋರಾಟಗಾರರು. ಎಂಥ ಪರಿಸ್ಥಿತಿ ಬಂದರೂ ಒಬ್ಬರೇ ನಿಂತುಕೊಂಡು ಇಡೀ ರಾಜ್ಯದ ಕಟ್ಟಿದ ರಾಜಕಾರಣಿ. ಯಾವುದಕ್ಕೂ ಹೆದರದ ರಾಜಕಾರಣಿ. ತನ್ನ ಮನಸ್ಸಿಗೆ ಏನು ಅನ್ನಿಸುತ್ತದೆಯೋ ಅದನ್ನ ಮಾಡುವಂತ ದಿಟ್ಟ ರಾಜಕಾರಣಿಯಾಗಿದ್ದರು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

  • ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ.

    ಮುಲಾಯಂಸಿಂಗ್ ಉತ್ತರಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು.

    ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ.#MulayamSinghYadav pic.twitter.com/ScP73neXWE

    — Siddaramaiah (@siddaramaiah) October 10, 2022 " class="align-text-top noRightClick twitterSection" data=" ">

ಇದನ್ನೂ ಓದಿ: ನನ್ನ ಬಹುಕಾಲದ ಗೆಳೆಯ ಮುಲಾಯಂ ಸಿಂಗ್ ನಿಧನದಿಂದ ದುಃಖಿತನಾಗಿದ್ದೇನೆ: ದೇವೇಗೌಡ

ಸಾಮಾನ್ಯ ವ್ಯಕ್ತಿಯಾಗಿ ಬಂದು ಮುಖ್ಯಮಂತ್ರಿ ಸ್ಥಾನಕ್ಕೇರಿ ರಾಷ್ಟ್ರೀಯ ರಾಜಕಾರಣದಲ್ಲಿ ಕೆಲಸ ಮಾಡಿದವರು. ದೇವೇಗೌಡರಿಗೆ ಸರಿಸಮನಾದ ವ್ಯಕ್ತಿ. ಬರ್ತಾ ಬರ್ತಾ ಇಂಥ ನಾಯಕರನ್ನ ಕಳೆದುಕೊಂಡರೆ ಈ ದೇಶದ ಭವಿಷ್ಯ ಅಷ್ಟೊಂದು ಉತ್ತಮವಾಗದ ರೀತಿಯಲ್ಲಿ ನಡೆಯೋದಿಲ್ಲ ಅನ್ನಿಸುತ್ತದೆ. ಇಂಥವರಿದ್ದರು ಅಂತ ಅವರ ನೆನಪಿಗಾಗಿ ಸರ್ಕಾರ ಏನಾದರೂ ಮಾಡಬೇಕಿದೆ. ಹೆಗಡೆಯವರ ಜೊತೆ ಒಂದರೆಡು ಬಾರಿ ಭೇಟಿಯಾಗಿದ್ದೆ.ಇಂಥ ಚಿಕ್ಕವಯಸ್ಸಿನಲ್ಲೇ ಕೌನ್ಸಿಲ್​ನಲ್ಲಿದ್ಯಾ ಅಂತ ಕೇಳಿದ್ದರು. ರಾಜ್ಯದಲ್ಲಿ ಎಸ್ ಪಿ ಪಕ್ಷ ಕಟ್ಟುವ ಪ್ರಯತ್ನ ಪಟ್ಟರು ಆದರೆ ಸರಿಯಾಗಿ ಸಂಘಟನೆಯಾಗಲಿಲ್ಲ ಅಷ್ಟೇ ಎಂದರು.

  • देश में जब भी मर्यादित और संसदीय परम्पराओं वाली राजनीति की चर्चा होगी, तो मुलायम सिंह यादव जी का ज़िक्र जरूर होगा।

    उनका जाना देश की समाजवादी विचारधारा और राजनीति के लिए बड़ी क्षति है।

    मेरा सौभाग्य है कि वो सदन में मेरे साथी सदस्य रहे और उनका हमेशा सहयोग मिला।

    नमन 🙏🙏 pic.twitter.com/p4sswDvTeq

    — Mallikarjun Kharge (@kharge) October 10, 2022 " class="align-text-top noRightClick twitterSection" data=" ">

ಸಿದ್ದರಾಮಯ್ಯ, ಖರ್ಗೆಯಿಂದ ಸಂತಾಪ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಯಾದವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ನಾಯಕ ಮುಲಾಯಂ ಸಿಂಗ್ ಯಾದವ್ ಸಾವು ಆಘಾತಕಾರಿ. ಮುಲಾಯಂಸಿಂಗ್ ಉತ್ತರಪ್ರದೇಶದಲ್ಲಿ ಕೋಮುವಾದದ ವಿರುದ್ಧದ ಪ್ರಬಲ ರಾಜಕೀಯ ಶಕ್ತಿಯಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.

ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿ, ದೇಶದಲ್ಲಿ ಸೀಮಿತ ಮತ್ತು ಸಂಸದೀಯ ಸಂಪ್ರದಾಯಗಳನ್ನು ಹೊಂದಿರುವ ರಾಜಕೀಯದ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಮುಲಾಯಂ ಸಿಂಗ್ ಯಾದವ್ ಜಿ ಪ್ರಸ್ತಾಪವಾಗುತ್ತದೆ. ಅವರ ನಿಧನದಿಂದ ದೇಶದ ಸಮಾಜವಾದಿ ಸಿದ್ಧಾಂತ ಮತ್ತು ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ. ಅವರು ಸದನದಲ್ಲಿ ನನ್ನ ಸಹ ಸದಸ್ಯರಾಗಿದ್ದರು ಮತ್ತು ಅವರು ಯಾವಾಗಲೂ ನನ್ನ ಬೆಂಬಲವನ್ನು ಪಡೆಯುತ್ತಿದ್ದರು ಎಂಬುದು ನನ್ನ ಅದೃಷ್ಟ. ಇದಲ್ಲದೆ ಹಲವು ಕಾಂಗ್ರೆಸ್ ನಾಯಕರು ಮಾಜಿ ಸಚಿವರು, ಶಾಸಕರು ಹಾಗೂ ಮಾಜಿ ಸಂಸದರು, ಕೇಂದ್ರದ ಮಾಜಿ ಸಚಿವರು ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.