ETV Bharat / state

ಭಿನ್ನಮತ ಶಮನಕ್ಕೆ ಮುಂದಾದ  ಹೈಕಮಾಂಡ್: ಆಗಸ್ಟ್​ 2 ರಂದು ದೆಹಲಿಯಲ್ಲಿ ರಾಜ್ಯ ಕೈ ನಾಯಕರೊಂದಿಗೆ ಸಭೆ

ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯದ ಕಾಂಗ್ರೆಸ್​ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ.

cong-high-command-convenes-2-meetings-with-karnataka-leaders-on-aug-2-in-delhi
ಭಿನ್ನಮತ ಶಮನಕ್ಕೆ ಮುಂದಾದ ಕಾಂಗ್ರೆಸ್ ಹೈಕಮಾಂಡ್: ಆಗಸ್ಷ್​ 2 ರಂದು ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಸಭೆ
author img

By

Published : Jul 29, 2023, 8:37 PM IST

Updated : Jul 29, 2023, 10:40 PM IST

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್​ನಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಮತ್ತು ಕರ್ನಾಟಕ ಕಾಂಗ್ರೆಸ್​ ಉನ್ನತ ನಾಯಕರ ನಡುವೆ ಮೊದಲ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಎರಡನೇ ಸಭೆಯು ಕಾಂಗ್ರೆಸ್ ಸಚಿವರೊಂದಿಗೆ ನಡೆಯಲಿದ್ದು, ಈ ಸಭೆಯಲ್ಲಿ ಪಕ್ಷದ ಕೆಲವು ಹಿರಿಯ ಶಾಸಕರು ಭಾಗವಹಿಸಬಹುದು ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಲೋಕಸಭಾ ಚುನಾವಣೆಯ ತಂತ್ರಗಾರಿಕೆಯ ಕುರಿತೂ ಚರ್ಚೆ: ಶತಾಯ ಗತಾಯ ಲೋಕಸಭೆಯಲ್ಲಿ ಗೆದ್ದು ಈ ಸಾರಿ ಅಧಿಕಾರ ಹಿಡಿಯಬೇಕೆಂಬ ಪ್ರಯತ್ನದಲ್ಲಿರುವ ಕಾಂಗ್ರೆಸ್‌ ಪಕ್ಷದ ನಾಯಕರು ಚುನಾವಣೆ ಪೂರ್ವ ಸಿದ್ಧತೆಯ ಬಗ್ಗೆಯೂ ಈ ಸಭೆ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಯ ತಂತ್ರಗಾರಿಕೆ ಕುರಿತು ನಡೆಯಲಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ‌ಅಹಮದ್, ಬಿ.ಎನ್ ಚಂದ್ರಪ್ಪ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ , ಕಾಂಗ್ರೆಸ್ ‌ಹಿರಿಯ ನಾಯಕರಾದ ಬಿ ಕೆ ಹರಿಪ್ರಸಾದ್, ಮುನಿಯಪ್ಪ, ಬಿಎಲ್ ಶಂಕರ್, ವೀರಪ್ಪ ಮೊಯ್ಲಿ, ಎಂಬಿ ಪಾಟೀಲ್, ಆರ್.ವಿ ದೇಶಪಾಂಡೆ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಇದೆ.

2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಕನಿಷ್ಠ 20 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿದ್ದು, 20 ಸ್ಥಾನ ಗೆಲ್ಲುವ ಕುರಿತು ಚುನಾವಣಾ ಕಾರ್ಯತಂತ್ರಗಳನ್ನ ರೂಪಿಸಲಾಗತ್ತೆ. ಲೋಕಸಭಾ ಚುನಾವಣಾ ತಂತ್ರಗಾರಿಕೆ ಭಾಗವಾಗಿ ನಡೆಯಲಿರುವ ಸಭೆ ಆಗಸ್ಟ್​ 2ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಪಕ್ಷದ ಶಾಸಕರ ಕುಂದುಕೊರತೆಗಳನ್ನು ಪರಿಹರಿಸಲು ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಸಭೆಗಳನ್ನು ಹೈಕಮಾಂಡ್​ ನಡೆಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಚಿವರು ಸಮಯಾವಕಾಶ ನೀಡುತ್ತಿಲ್ಲ ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಸಭೆಯಲ್ಲಿ ಅನೇಕ ಶಾಸಕರು ಅಸಮಾಧಾನ ತೋಡಿಕೊಂಡಿದ್ದರು.

ಇದೇ ವೇಳೆ ಸಚಿವರ ವಿರುದ್ಧ ಅಸಮಾಧಾನಗೊಂಡಿದ್ದ ಶಾಸಕರು ಸಹಿ ಅಭಿಯಾನವನ್ನೂ ನಡೆಸಿದ್ದರು. ಆದರೆ ಇದಕ್ಕೆ ಪಕ್ಷದ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿತ್ತು. ಸಭೆಯಲ್ಲಿ ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಇಂತಹ ತಂತ್ರಗಳನ್ನು ಮಾಡಬೇಡಿ ಎಂದು ತಾಕೀತು ಮಾಡಿದ್ದರು ಎಂದು ಕಾಂಗ್ರೆಸ್​ ನಾಯಕರೊಬ್ಬರು ಹೇಳಿದ್ದಾರೆ.

ಸಭೆಯ ವಿವರ ನೀಡಲು ನಿರಾಕರಿಸಿದ ಪರಮೇಶ್ವರ್​: ಆದರೆ, ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾಗಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಸ್ಪಷ್ಟಪಡಿಸಿದ್ದು, ಸಭೆ ವೇಳೆ ನಡೆದ ಚರ್ಚೆಗಳ ಬಗ್ಗೆ ವಿವರಣೆ ನೀಡಲು ನಿರಾಕರಿಸಿದ್ದಾರೆ.

ಶಾಸಕಾಂಗ ಪಕ್ಷದ ಸದಸ್ಯರ ಸಭೆ ಕರೆಯಬೇಕು ಎಂದು ಕೆಲವು ಶಾಸಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಲು ಬಯಸಿದ್ದರಿಂದ ಹಿಂದಿನ ಸಿಎಲ್‌ಪಿ ಸಭೆ ಅರ್ಧಕ್ಕೆ ಅಂತ್ಯಗೊಂಡಿತ್ತು. ಹಾಗಾಗಿ ಈ ಸಭೆ ಕರೆಯಲಾಗಿತ್ತು ಎಂದು ಶುಕ್ರವಾರ ಪರಮೇಶ್ವರ್​ ಮಾಧ್ಯಮಗಳ ಎದುರು ಮಾತನಾಡುವಾಗ ತಿಳಿಸಿದ್ದರು. ಅಷ್ಟೇ ಅಲ್ಲ, ‘ಪತ್ರ ಬರೆಯುವುದು ಸರಿಯಲ್ಲ’ ಎಂದು ಸಿದ್ದರಾಮಯ್ಯ ಶಾಸಕರಿಗೆ ಮನವಿ ಮಾಡಿಕೊಂಡರು ಎಂದು ಅವರು ಇದೇ ವೇಳೆ ಹೇಳಿದ್ದರು.

ಇದನ್ನೂ ಓದಿ: ಪಕ್ಷ ಬಲವರ್ಧನೆಗೆ ದಳಪತಿಗಳ ಚಿಂತನೆ: ಎಲ್ಲಾ ಸಮುದಾಯದ ನಾಯಕರನ್ನು ಹುಟ್ಟುಹಾಕಲು ಸಜ್ಜಾಗುತ್ತಿರುವ ಜೆಡಿಎಸ್‌

Last Updated : Jul 29, 2023, 10:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.