ಬೆಂಗಳೂರು: ಬಿಜೆಪಿಯ ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಲು ರಾಜ್ಯ ಬಿಜೆಪಿ ಜೂ. 5 ರಂದು ಸಮಾರಂಭ ಆಯೋಜಿಸಿದೆ. ನಗರದ ಅರಮನೆ ಮೈದಾನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಬಿಜೆಪಿಯಿಂದ ಆಯ್ಕೆಯಾಗಿರುವ 25 ಸಂಸದರನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ. 10-12 ಸಾವಿರ ಪ್ರಮುಖರ ಸಮ್ಮುಖದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದು, ಇಂದಿನಿಂದಲೇ ಸಮಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.