ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಬಳಸಿ ಪೇ ಸಿಎಂ (PAYCM) ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧನವಾಗಿದೆ. ಇನ್ನೂ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಪೇ ಸಿಎಂ ಶೀರ್ಷಿಕೆಯಡಿ ಸಿಎಂ ಫೋಟೋ ಬಳಸಿ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ನಾಲ್ಕು ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: ಪೇ ಸಿಎಂ ಪೋಸ್ಟರ್.. ಕಾಂಗ್ರೆಸ್, ಬಿಜೆಪಿಯಿಂದ ಪರ-ವಿರೋಧದ ಅಭಿಪ್ರಾಯ ವ್ಯಕ್ತ
ಈ ಪ್ರಕರಣಗಳ ತನಿಖೆ ನಡೆಸಲು ಸಿಸಿಬಿಗೆ ನಗರದ ಪೊಲೀಸ್ ಆಯುಕ್ತರು ಸೂಚಿಸಿದ್ದರು. ಬುಧವಾರ ರಾತ್ರಿ ಹೈಗ್ರೌಂಡ್ಸ್ ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಐವರು ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಈ ರೀತಿ ಪೋಸ್ಟರ್ ಹಾಕಲಾಗಿದೆ: ಸಿಎಂ