ETV Bharat / state

ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

author img

By ETV Bharat Karnataka Team

Published : Oct 29, 2023, 11:20 AM IST

ಮುಂಬರುವ ವಿಧಾನಪರಿಷತ್​ ಚುನಾವಣೆ ಹಿನ್ನೆಲೆಯಲ್ಲಿ ಐದು ಕ್ಷೇತ್ರಗಳಿಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.

congress-announces-5-candidates-for-karnatakas-legislative-council-polls
ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ಕರ್ನಾಟಕ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಎರಡು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಅಭ್ಯರ್ಥಿಗಳಾಗಿ ರಾಮೋಜಿ ಗೌಡ, ಪುಟ್ಟಣ್ಣ, ಕೆ.ಕೆ.ಮಂಜುನಾಥ್, ಡಿ.ಟಿ.ಶ್ರೀನಿವಾಸ್, ಡಾ.ಚಂದ್ರಶೇಖರ್ ಪಾಟೀಲ್ ಹೆಸರುಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐವರು ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಪಾಟೀಲ್‌ ಅವರನ್ನು ಅಭ್ಯರ್ಥಿಯಾಗಿ ಪರಿಷತ್ ಚುನಾವಣೆಯ ಕಣಕ್ಕಿಳಿಸಲು ಎಐಸಿಸಿ ನಿರ್ಧರಿಸಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೆಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಜೂನ್ 21, 2024ಕ್ಕೆ ನಿವೃತ್ತಿಯಾಗಲಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ಆಯನೂರು ಮಂಜುನಾಥ್ ರಾಜೀನಾಮೆಯಿಂದ ಏಪ್ರಿಲ್ 19ರಿಂದ ತೆರವಾಗಿದ್ದು, ಈ ಸ್ಥಾನದ ಅವಧಿ 21-06-2024 ತನಕ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ ಮಾ.16ಕ್ಕೆ ತೆರವಾದ ಸ್ಥಾನದ ಅವಧಿ 11-11-2026 ತನಕ ಇದೆ.

ಈಗಾಗಲೇ ವಿಧಾನ ಪರಿಷತ್‌ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಸೆಪ್ಟೆಂಬರ್ 30ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ. ನವೆಂಬರ್ 6ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಕರಡು ಪಟ್ಟಿ ಸಿದ್ದಪಡಿಸಲು ನ.20 ಕಡೆಯ ದಿನ. ನ.23 ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23 ರಿಂದ ಡಿ.9 ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಡಿ.25 ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30 ರಂದು ಅಂತಿಮವಾಗಿ ಮತದಾರರ ಪಟ್ಟಿ ಪ್ರಕಟವಾಗಲಿದೆ.

ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಈ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮೂರು ಪಕ್ಷಗಳು ಸಿದ್ಧತೆ ಆರಂಭಿಸಿದೆ. ಮೂರು ಪಕ್ಷಗಳಲ್ಲಿ ಟಿಕೆಟ್​ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಸಂಬಂಧ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಇದೀಗ ಪ್ರಕಟಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ರಾಜಾಜಿನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಪುಟ್ಟಣ್ಣಗೆ ಎಐಸಿಸಿ ಇದೀಗ ಪರಿಷತ್ ಚುನಾವಣೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ಮತ್ತೆ ಪುಟ್ಟಣ್ಣಗೆ ತಮ್ಮ ರಾಜೀನಾಮೆಯಿಂದ ತೆರವಾಗಿದ್ದ ಅದೇ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿದೆ.

ಇತ್ತ ಪತ್ನಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಜೊತೆ ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾದ ಡಿ.ಟಿ.ಶ್ರೀನಿವಾಸ್​ಗೆ ಎಐಸಿಸಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿದೆ. ಡಿ.ಟಿ.ಶ್ರೀನಿವಾಸ್ ಕಳೆದ ಬಾರಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈ ಶಿಕ್ಷಕರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ನಾಯಕತ್ವದಲ್ಲಿ ಸರ್ಕಾರ ಸ್ಥಿರವಾಗಿದೆ, ಸಿಎಂ ಬದಲಾವಣೆ ಇಲ್ಲ: ಆರ್.ವಿ.ದೇಶಪಾಂಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.