ETV Bharat / state

'ಬೊಮ್ಮಾಯಿ ಸರ್ಕಾರ 'BAD', ರಾಜ್ಯದ ಅಭಿವೃದ್ಧಿಗೆ ಶಾಪ': ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಾಪ್ರಹಾರ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್​ ಪಕ್ಷವು ರಾಜ್ಯ ಸರ್ಕಾರದ ಮುಂದೆ 16 ಪ್ರಶ್ನೆಗಳನ್ನು ಇಟ್ಟಿದೆ. ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ​ ವಿವಾದಾತ್ಮಕ ಹೇಳಿಕೆಯನ್ನು ಕಲಾಪದಲ್ಲಿ ಪ್ರಶ್ನಿಸಲು ಕೈ ನಾಯಕರು ನಿರ್ಧರಿಸಿದ್ದಾರೆ.

congress
ರಣದೀಪ್ ಸಿಂಗ್ ಸುರ್ಜೇವಾಲಾ
author img

By

Published : Feb 16, 2023, 1:11 PM IST

ಬೆಂಗಳೂರು: "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಮೂರು ಪದಗಳಲ್ಲಿ ಬಣ್ಣಿಸುವುದಾದರೆ 'BAD(ಬ್ಯಾಡ್​)' ಎನ್ನಬಹುದು. ಅಕ್ಷರಗಳಲ್ಲಿ ಹೇಳುವುದಾದರೆ Broken Promises (ಮುರಿದ ಭರವಸೆಗಳು)- Abysmal Governance (ಹೀನಾಯ ಆಡಳಿತ)- Divisive Agenda (ವಿಭಜಕ ಅಜೆಂಡಾ) ಎಂದರ್ಥ. ಕೇವಲ ಮೂರೇ ಅಕ್ಷರದಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ವರ್ಣಿಸಬಹುದಾಗಿದೆ" ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಬೊಮ್ಮಾಯಿ ಸರ್ಕಾರವು ಅಸಮರ್ಥರ ಸರ್ಕಸ್‌ ಮತ್ತು ಭ್ರಷ್ಟಾಚಾರದ ಹೆಗ್ಗುರುತು ಆಗಿದೆ. ಅಲ್ಲದೇ ಬಿಜೆಪಿಯನ್ನು ಮೂರು ಪದಗಳಲ್ಲಿ ಹೇಳುವುದಾದರೆ, ಸುಳ್ಳು ಭರವಸೆ, ದುರಾಡಳಿತ, ಒಡೆದು ಆಳುವ ನೀತಿಯನ್ನು ತೋರಿಸುತ್ತದೆ. ಬಿಜೆಪಿಯ ಡಿಎನ್ಎ ಮೂರು 'ಡಿ'ಗಳಿಂದ ಕೂಡಿದ್ದು, Dupe(ವಂಚನೆ), Deceive(ಮೋಸ), Divide(ವಿಭಜನೆ) ಆಗಿದೆ. ಪಕ್ಷಾಂತರ ಹಾಗೂ ಭ್ರಷ್ಟಾಚಾರದಿಂದ ರಚನೆಯಾದ ಬಿಜೆಪಿಯ ಅನೈತಿಕ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಶಾಪವಾಗಿದೆ" ಎಂದರು.

"ಈ ಸರ್ಕಾರ ಸುಳ್ಳು ಭರವಸೆ ಮೂಲಕ ರಾಜ್ಯದ ಜನರ ಕನಸನ್ನು ನುಚ್ಚು ನೂರು ಮಾಡಿದೆ. ಜೊತೆಗೆ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ. ಈ ಲಂಪಟ ಹಾಗೂ ಭ್ರಷ್ಟಾಚಾರದ ಕೂಪವಾಗಿರುವ ಸರ್ಕಾರದಲ್ಲಿ ಬೊಮ್ಮಾಯಿ ಅವರು PayCM(ಪೇಸಿಎಂ) ಹಾಗೂ ಅವರ ಸರ್ಕಾರ ಶೇ40ರಷ್ಟು ಕಮಿಷನ್​ ಎಂಬ ಖ್ಯಾತಿ ಪಡೆದಿದೆ. ರಾಜ್ಯದಲ್ಲಿರುವ ಈ ಸರ್ಕಾರವು 6.50 ಕೋಟಿ ಜನರ 6 ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ" ಎಂದು ಪ್ರಶ್ನೆಗಳ ವಿವರ ನೀಡಿದರು.

ಪ್ರಶ್ನೆಗಳು ಹೀಗಿವೆ: ಬೊಮ್ಮಾಯಿ ಅವರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಬಿಜೆಪಿಯ 2018ರ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ.91ರಷ್ಟು ಭರವಸೆಗಳನ್ನು ಈಡೇರಿಸಲು ವಿಫಲವಾಗಿರುವುದೇಕೆ? ರೈತರಿಗೆ ಕೊಟ್ಟ 112 ಭರವಸೆಗಳ ಪೈಕಿ 97 ಭರವಸೆಗಳನ್ನು ಈಡೇರಿಸಲು ಈ ಸರ್ಕಾರ ವಿಫಲವಾಗಿದ್ದು ಯಾಕೆ? ರೈತರ ಸಾಲ ಮನ್ನಾ ಮಾಡುವ ಭರವಸೆ ಏನಾಯ್ತು? ಇನ್ನು ರೈತರಿಗೆ ನ್ಯಾಯಯುತ ಬೆಂಬಲ ಬೆಲೆ (MSP) ನೀಡುವ ಭರವಸೆ ಏನಾಯ್ತು?

ಬಿಜೆಪಿ ಸರ್ಕಾರ ಮಹಿಳೆಯರಿಗೆ ನೀಡಿದ್ದ 26 ಭರವಸೆಗಳ ಪೈಕಿ 24 ಭರವಸೆ ಈಡೇರಿಸಲು ವಿಫಲವಾಗಿದೆ. 10 ಸಾವಿರ ಕೋಟಿಯ ಸ್ತ್ರೀ ಉನ್ನತಿ ನಿಧಿ ಯೋಜನೆ ಏನಾಯ್ತು? ರಾಜ್ಯದ ಹೆಣ್ಣು ಮಕ್ಕಳಿಗೆ ನೀಡುತ್ತೇವೆ ಎಂದಿದ್ದ ಉಚಿತ ಸ್ಮಾರ್ಟ್ ಫೋನ್​ಗಳು ಎಲ್ಲಿ ಹೋದವು? ರಾಜ್ಯದ ಯುವಕರಿಗೆ ಕೊಟ್ಟ 18 ಭರವಸೆಗಳಲ್ಲಿ 17 ಭರವಸೆ ಈಡೇರಿಸಲು ಸರ್ಕಾರ ವಿಫಲವಾಗಿದ್ದೇಕೆ? ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿಯಾಗಿಲ್ಲ. ನೇಮಕಾತಿ ಅಕ್ರಮಗಳ ಪರಿಣಾಮ 2.52 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಇದು ಯುವಕರ ಭವಿಷ್ಯಕ್ಕೆ ಗ್ರಹಣ ಹಿಡಿಯುವಂತೆ ಮಾಡಿದೆ. 1300 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದ ಪಿಯು ಕಾಲೇಜು ನಿರ್ಮಾಣವಾಗಿಲ್ಲ. ಪದವಿವರೆಗೂ ಉಚಿತ ಶಿಕ್ಷಣ ನೀಡುವ ಭರವಸೆಯನ್ನು ಸರ್ಕಾರ ಕಸದಬುಟ್ಟಿಗೆ ಎಸೆದಿರುವುದೇಕೆ?

ಇದನ್ನೂ ಓದಿ: ಟಿಪ್ಪುವಿನಂತೆ ಹೊಡೆದು ಹಾಕಬೇಕು: ಸಚಿವ ಅಶ್ವತ್ಥನಾರಾಯಣ್​ ಹೇಳಿಕೆಗೆ ಸಿದ್ದರಾಮಯ್ಯ ಕೆಂಡಾಮಂಡಲ

ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯಗಳಿಗೆ ನೀಡಿದ್ದ 81 ಭರವಸೆಗಳಲ್ಲಿ 77 ಭರವಸೆಗಳನ್ನು ಈಡೇರಿಸದೇ ದ್ರೋಹ ಬಗೆದಿರುವುದೇಕೆ? ಈ ಸಮುದಾಯದ ಮಕ್ಕಳಿಗೆ 4,500 ಕೋಟಿಯ ವಿದ್ಯಾರ್ಥಿ ವೇತನ ಎಲ್ಲಿದೆ? ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯಕ್ಕೆ ಘೋಷಿಸಿದ್ದ ರೂ.15,000 ಕೋಟಿ ವೆಚ್ಚದ ವಸತಿ ನಿರ್ಮಾಣ ಭರವಸೆ ಪೂರ್ಣಗೊಂಡಿಲ್ಲ. ಜೊತೆಗೆ ಎಸ್​ಸಿ, ಎಸ್​ಟಿಗೆ ಮೀಸಲಾದ 7000 ಕೋಟಿ ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವ ಮೂಲಕ ಎಸ್​ಸಿ, ಎಸ್​ಟಿ ಸಮುದಾಯಕ್ಕೆ ವಂಚಿಸಿದ್ದೇಕೆ?

2018ರ ಬಿಜೆಪಿ ಪ್ರಣಾಳಿಕೆಯಲ್ಲಿ ಶಿಕ್ಷಣ ಕೇತ್ರಕ್ಕೆ ಘೋಷಿಸಲಾದ 32 ಭರವಸೆಗಳ ಪೈಕಿ 29 ಈಡೇರಿಸಿಲ್ಲ. ಆರೋಗ್ಯ ಕ್ಷೇತ್ರಕ್ಕೆ ನೀಡಿದ್ದ 40 ಭರವಸೆಗಳ ಪೈಕಿ 35 ಭರವಸೆ ಈಡೇರಿಲ್ಲ. ಮೂಲ ಸೌಕರ್ಯ ಕ್ಷೇತ್ರದಲ್ಲಿ 48 ಭರವಸೆಗಳ ಪೈಕಿ 40 ಭರವಸೆ ಪೂರ್ಣಗೊಂಡಿಲ್ಲ. ಕೈಗಾರಿಕಾಭಿವೃದ್ಧಿಗೆ 23 ಭರವಸೆಗಳನ್ನು ನೀಡಿ 22 ಭರವಸೆ ಈಡೇರಿಸಿಲ್ಲ. ಈ ಭರವಸೆಗಳ ವಿಚಾರಗಳಲ್ಲಿ ಸರ್ಕಾರ ವಿಫಲವಾಗಿದ್ದು ಏಕೆ? ಎಂದು ಪ್ರಶ್ನಿಸಿದರು.

ಇದಲ್ಲದೇ, 2018ರ ಬಿಜೆಪಿ ಪ್ರಣಾಳಿಕೆಯ ಸುಳ್ಳಿನ ಸರಮಾಲೆ ಒಂದು ಕಡೆಯಾದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ಬಜೆಟ್​ನಲ್ಲೂ ಸುಳ್ಳಿನ ಸರಮಾಲೆ ಪೋಣಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್​ನಲ್ಲಿ ಹೇಳಿರುವ ಸುಳ್ಳುಗಳ ಬಗ್ಗೆ ಈ 10 ಪ್ರಶ್ನೆ ಕೇಳಲಾಗುತ್ತಿದ್ದು, ಸರ್ಕಾರ ಜನರಿಗೆ ಉತ್ತರ ನೀಡಲಿ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಹತ್ತು ಪ್ರಶ್ನೆಗಳು ಯಾವುದು?: ಬಜೆಟ್​ನಲ್ಲಿ ಘೋಷಿಸಲಾದ 339 ಕಾರ್ಯರೂಪಕ್ಕೆ ತರುವ ಭರವಸೆಗಳ ಪೈಕಿ 207 ಭರವಸೆಗಳನ್ನು ಸರ್ಕಾರಿ ಆದೇಶಕ್ಕೆ ಮಾತ್ರ ಸೀಮಿತವಾಗಿದ್ದರೆ, ಉಳಿದ 132 ಭರವಸೆಗಳನ್ನು ಅನುಷ್ಠಾನಕ್ಕೆ ತಂದಿಲ್ಲ ಯಾಕೆ? ಜನವರಿ 1, 2023ರವರೆಗೆ ಬೊಮ್ಮಾಯಿ ಸರ್ಕಾರ 2022-2023ನೇ ಸಾಲಿನ ಬಜೆಟ್​ನಲ್ಲಿ ಘೋಷಿಸಲಾದ ಅನುದಾನಗಳ ಪೈಕಿ ಕೇವಲ ಶೇ 56ರಷ್ಟು ಮಾತ್ರ ಬಳಕೆ ಮಾಡಿರುವುದು ಏಕೆ? (2.5 ಲಕ್ಷ ಕೋಟಿ ಪೈಕಿ 1.4 ಲಕ್ಷ ಕೋಟಿ ಮಾತ್ರ ಬಳಕೆಯಾಗಿದೆ)

ಇನ್ನು 438 ನಮ್ಮ ಕ್ಲಿನಿಕ್​ಗಳು ಕೇವಲ ಕಾಗದದ ಮೇಲೆ ಉಳಿದಿರುವುದೇಕೆ? 19 ಲಕ್ಷ ಬಾಲಕಿಯರಿಗೆ ನೆರವಾಗಬೇಕಿದ್ದ ಶುಚಿ ಯೋಜನೆಯನ್ನು ಇದುವರೆಗೆ ಪುನಾರಾರಂಭಿಸಿಲ್ಲ ಏಕೆ? 2022-23ನೇ ಸಾಲಿನ ಬಜೆಟ್​ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನೀಡಿದ್ದ 3,000 ಕೋಟಿ ರೂಪಾಯಿಗಳ ಅನುದಾನ ಪೈಕಿ ಬಸವರಾಜ ಬೊಮ್ಮಾಯಿ ಶೇ 50ರಷ್ಟು ಅನುದಾನವನ್ನೂ ಬಳಸಿಲ್ಲ ಏಕೆ? ಬಜೆಟ್​ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ಮಂಡಳಿ ಮತ್ತು ಬಿಲ್ಲವ ಕೋಶಕ್ಕೆ ಅನುದಾನ ಬಿಡುಗಡೆ ಮಾಡಲು ಬಸವರಾಜ ಬೊಮ್ಮಾಯಿ ವಿಫಲರಾಗಿದ್ದು ಏಕೆ?

ಎಲ್ಲ ಜಾತಿಗಳಿಗೂ ಮೀಸಲಾತಿ ನೀಡುವ ಕುರಿತು ಬಸವರಾಜ ಬೊಮ್ಮಾಯಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದು ಏಕೆ? ಬೊಮ್ಮಾಯಿ ಮತ್ತು ಮೋದಿ ಸರ್ಕಾರ ಎಸ್​ಸಿ, ಎಸ್​ಟಿ ಮೀಸಲಾತಿ ಕಾಯಿದೆಯನ್ನು ಸಂವಿಧಾನದ 9ನೇ ಷೆಡ್ಯೂಲ್​ಗೆ ಸೇರಿಸುವ ಪ್ರಕ್ರಿಯೆಗೆ ಮುಂದಾಗಿಲ್ಲ ಯಾಕೆ? ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯನ್ನು ತರಾತುರಿಯಲ್ಲಿ ಘೋಷಣೆ ಮಾಡಿದ್ದು ಏಕೆ? ಆ ಸಮುದಾಯವನ್ನು ಹಿಡಿದುಕೊಳ್ಳಲು ಈ ತಂತ್ರನಾ? ಎಸ್​ಸಿ, ಕುರುಬ ಹಾಗೂ ಇತರೆ ಹಿಂದುಳಿದ ಸಮುದಾಯಗಳಿಗೆ ಕೊಟ್ಟ ಭರವಸೆ ಈಡೇರಿಸದೇ ಮುಖ್ಯಮಂತ್ರಿಗಳು ಬೆನ್ನಿಗೆ ಚೂರಿ ಹಾಕುತ್ತಿರುವುದು ಏಕೆ? ಗೋವಾದಲ್ಲಿ ಕನ್ನಡ ಭವನ ಎಲ್ಲಿದೆ? ಎಂದು ಸರ್ಕಾರಕ್ಕೆ ಪ್ರಶ್ನಿಸಿದರು.

ಅಶ್ವತ್ಥ್​ ನಾರಾಯಣ್​ಗೆ ಟಾಂಗ್: ಈ ವೇಳೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ಮಾತನಾಡಿರುವ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, "ಟಿಪ್ಪು ಕೊಂದವರು ಉರಿಗೌಡ ನಂಜೇಗೌಡ ಅಂತಿದ್ದಾರೆ. ಯಾವ ಇತಿಹಾಸದ ಪುಟದಲ್ಲಿ ದಾಖಲಾಗಿದೆ? ಯಾವ ಪುಸ್ತಕದಲ್ಲಿ ಬರೆದಿದ್ದಾರೆ? ಇವರು ವಾಟ್ಸ್​ಆ್ಯಪ್​​ ಯೂನಿವರ್ಸಿಟಿಯಲ್ಲಿ ಓದಿಕೊಂಡು‌ ಬಂದಿದ್ದಾರೆ. ಕೇಶವ ಕೃಪಾದಲ್ಲಿ ಹೇಗೆ ಹೇಳ್ತಾರೋ ಹಾಗೇ ಅಶ್ವತ್ಥ್​ ನಾರಾಯಣ, ಸಿ.ಟಿ ರವಿ ಮಾತನಾಡುತ್ತಿದ್ದಾರೆ. ಟಿಪ್ಪು ತರಹ ಹೊಡೆದು ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಕೂಡ ದಾಖಲೆ ಇಟ್ಟು ಸದನದಲ್ಲಿ ಮಾತನಾಡುತ್ತೇವೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಶ್ವತ್ಥ ನಾರಾಯಣ್ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ವಿಧಾನಸಭೆಯಲ್ಲಿ ಪ್ರಸ್ತಾಪಿಸಲು‌ ಕೈ ನಾಯಕರು ತೀರ್ಮಾನಿಸಿದ್ದಾರೆ. ಇಂದು ಸದನದಲ್ಲಿ ಅಶ್ವತ್ಥ​ ನಾರಾಯಣ್ ಹೇಳಿಕೆ ವಿಚಾರ ಪ್ರಸ್ತಾಪಕ್ಕೆ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ 10 ಜನಕ್ಕೆ ಸಿಎಂ ಆಗುವ ಆಸೆ, ಅದ್ರಲ್ಲಿ ನಾನೂ ಒಬ್ಬ: ಪರಮೇಶ್ವರ್ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.