ETV Bharat / state

ರಾಜರಾಜೇಶ್ವರಿ ನಗರದಲ್ಲಿ ಒಕ್ಕಲಿಗರ ಪ್ರಾಬಲ್ಯಕ್ಕೆ ಮಣೆ ಹಾಕಲು ಮುಂದಾಯ್ತಾ ಕಾಂಗ್ರೆಸ್?

author img

By

Published : Oct 4, 2020, 7:55 PM IST

ಎರಡು ದಿನಗಳಲ್ಲಿ ಪಕ್ಷದಿಂದ ಅಧಿಕೃತ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ನಂತರ ಡಿಕೆ ಸೋದರರ ನೇತೃತ್ವದಲ್ಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉತ್ಸಾಹದಲ್ಲಿದೆ..

ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಉಪಚುನಾವಣೆ
ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಉಪಚುನಾವಣೆ

ಬೆಂಗಳೂರು : ನಗರದ ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಒಕ್ಕಲಿಗ ಅಭ್ಯರ್ಥಿಗೆ ಮಣೆ ಹಾಕಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಒಟ್ಟು 4.8 ಲಕ್ಷ ಮತದಾರರನ್ನು ಒಳಗೊಂಡಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಸಮುದಾಯದವರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರ್ಕಾರದ ಪತನಕ್ಕೆ ಕಾರಣರಾಗಿರುವ ಮುನಿರತ್ನ ವಿರುದ್ಧ ಪ್ರಬಲ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಿ ಕಾಂಗ್ರೆಸ್ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಹೈಕಮಾಂಡ್​ಗೆ ಕಳುಹಿಸಿರುವ ಕಾಂಗ್ರೆಸ್ ರಾಜ್ಯ ನಾಯಕರು, ಇಬ್ಬರು ಒಕ್ಕಲಿಗ ನಾಯಕರನ್ನೇ ಆಯ್ಕೆಗೆ ಪರಿಗಣಿಸಿದ್ದಾರೆ ಎಂಬ ಮಾಹಿತಿ ಇದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಗಾಗಲೇ ಆಯ್ಕೆಯಾಗಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಮಿತಿಯ ಜೊತೆ ಚರ್ಚಿಸಿದ್ದು, ಮೊದಲ ಆಯ್ಕೆಯಾಗಿ ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ ಕುಸುಮಾ ಹಾಗೂ ಮಾಗಡಿ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ 2ನೇ ಆಯ್ಕೆಯಾಗಿಯೂ ಪರಿಗಣಿಸಿದೆ ಎಂಬ ಮಾಹಿತಿ ಇದೆ.

ಇಬ್ಬರಲ್ಲಿ ಯಾರೇ ಅಭ್ಯರ್ಥಿಯಾದ್ರೂ ಒಕ್ಕಲಿಗ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತ. ಒಕ್ಕಲಿಗ ಸಮುದಾಯದ ಮತವಲ್ಲದೆ ಸುಮಾರು ಇಪ್ಪತ್ತೈದು ಸಾವಿರದಷ್ಟಿರುವ ಮುಸ್ಲಿಂ ಮತದಾರರು ತಲಾ 70,000 ದಲಿತರು ಹಾಗೂ ಹಿಂದುಳಿದ ವರ್ಗದ ಮತದಾರರು ಸಾವಿರದಷ್ಟಿರುವ ಮತದಾರರ ಮೇಲೆ ದೃಷ್ಟಿ ನೆಟ್ಟಿದೆ. ಕ್ಷೇತ್ರದಲ್ಲಿ ಲಿಂಗಾಯತರ ಸಂಖ್ಯೆ 45 ಸಾವಿರದಷ್ಟಿದೆ. ಬಿಜೆಪಿ ಈ ಮತ ಬುಟ್ಟಿಯನ್ನ ಸೆಳೆಯುವುದು ಸಾಮಾನ್ಯ. ಈ ಹಿನ್ನೆಲೆ ಕಾಂಗ್ರೆಸ್ 35 ಸಾವಿರದಷ್ಟಿರುವ ಇತರೆ ಮತದಾರರು ಮೇಲೆ ಸಾಕಷ್ಟು ಗಮನ ಹರಿಸಲಿದೆ.

ಲಿಂಗಾಯತ ಮತದಾರರನ್ನು ಹೊರತುಪಡಿಸಿ ಕೈಬಿಟ್ಟು ಹೋಗಿರುವ ಇತರೆ ಸಮುದಾಯದ ಮತವನ್ನು ಕೂಡ ಸೆಳೆಯಲು ಪ್ರಯತ್ನಿಸಿರುವ ಕಾಂಗ್ರೆಸ್, ಇದೆಲ್ಲದರ ಮಧ್ಯೆ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಮತದಾರರ ಮೇಲೆ ಕಣ್ಣು ನೆಟ್ಟಿದೆ. ಈ ಕಾರಣಕ್ಕಾಗಿಯೇ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಉತ್ಸಾಹವನ್ನು ಪಕ್ಷ ತೋರಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಉಪ ಚುನಾವಣೆ ಇದಾಗಿದೆ. ಜೊತೆಗೆ ಸೋದರ ಡಿ ಕೆ ಸುರೇಶ್ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದ ಗೆಲುವು ಡಿಕೆ ಸೋದರರ ಪಾಲಿಗೆ ಅತ್ಯಂತ ಪ್ರಮುಖ. ಈ ಹಿನ್ನೆಲೆ ಇವರು ಇಲ್ಲಿ ಒಕ್ಕಲಿಗ ನಾಯಕರಿಗೆ ಪ್ರಾಮುಖ್ಯತೆ ನೀಡಲು ವಿಶೇಷ ಗಮನ ಹರಿಸಿದ್ದಾರೆ.

ಸಾಕಷ್ಟು ವಿವಾದಕ್ಕೀಡಾಗಿದ್ದರು ಕೂಡ ಡಿ ಕೆ ರವಿ ಅವರ ಪತ್ನಿ ಕುಸುಮ ಅವರನ್ನು ಇಂದು ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡಿದೆ. ಪ್ರಾಥಮಿಕ ಸದಸ್ಯತ್ವವನ್ನೂ ನೀಡಿದ್ದು, ಇವರನ್ನೇ ಅಭ್ಯರ್ಥಿಯಾಗಿಸುವ ಸೂಚನೆಯನ್ನು ಸಹ ಕೊಟ್ಟಿದೆ. ಅಧಿಕೃತ ಅಭ್ಯರ್ಥಿಯನ್ನು ಘೋಷಿಸುವ ಅವಕಾಶವನ್ನು ಪಕ್ಷದ ಹೈಕಮಾಂಡ್ ರಾಜ್ಯ ನಾಯಕರಿಗೆ ನೀಡದ ಹಿನ್ನೆಲೆ ಇಂದು ರಾಜ್ಯ ನಾಯಕರು ಹೈಕಮಾಂಡ್ ಕೈತೋರಿಸಿ ಕುಳಿತಿದ್ದಾರೆ.

ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆ, ಇವರನ್ನು ಸೋಲಿಸಲೇಬೇಕೆಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಒಬ್ಬ ಪ್ರಬಲ ಅಭ್ಯರ್ಥಿಯನ್ನು ಇವರ ವಿರುದ್ಧ ನಿಲ್ಲಿಸಲು ನಿರ್ಧರಿಸಿದ್ದಾರೆ. ಎರಡು ದಿನಗಳಲ್ಲಿ ಪಕ್ಷದಿಂದ ಅಧಿಕೃತ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ನಂತರ ಡಿಕೆ ಸೋದರರ ನೇತೃತ್ವದಲ್ಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉತ್ಸಾಹದಲ್ಲಿದೆ. ಪಟ್ಟಿ ಹೈಕಮಾಂಡ್​ಗೆ ರವಾನೆಯಾಗಿದ್ದು, ಎರಡು ದಿನಗಳಲ್ಲಿ ಅಧಿಕೃತ ಮಾಹಿತಿ ಲಭಿಸಲಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.